ಮುಂಡಗೋಡ -
ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತ ಕಾರಿ ಪ್ರಕರಣ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿ ಯನ್ನು ಬಂಧಿಸಿದ್ದಾರೆ ತಾಲೂಕಿನ ಇಸ್ಮಾಯಿಲ್ ಹುಲಗೂರ (65) ಬಂಧಿತ ಆರೋಪಿಯಾಗಿದ್ದಾನೆ ಆರನೇ ತರಗತಿಯ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದು, ಬಾಲಕಿಯನ್ನು ಪುಸಲಾಯಿಸಿ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮನೆಯವರಿಗೆ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.
ಸಂತ್ರಸ್ತೆ ಈಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಇನ್ನೊಂದು ವಾರದಲ್ಲಿ ಹೆರಿಗೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಮಗಳು ಗರ್ಭಿಣಿಯಾಗಿರುವ ಸಂಗತಿ ಮನೆಯವರಿಗೆ ತಿಳಿದೇ ಇರಲಿಲ್ಲ. ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ವಿಷಯ ಬಹಿರಂಗ ವಾಗಿದೆ.ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ದಲಿತ ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇಂತಹ ಹೀನ ಕೃತ್ಯ ಎಸಗಿದ ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿವೆ.
ಸುದ್ದಿ ಸಂತೆ ನ್ಯೂಸ್ ಮುಂಡಗೋಡ.....