LIVE TV LocalCrimeNationalInternationalPoliticsEducationTechnologyEntertainmentSportsFeature
State News

'72' ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಗಳಿಗೆ ಬಡ್ತಿ ಭಾಗ್ಯ

ಬೆಂಗಳೂರು -

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್‍ಸ್ಟೇಬಲ್ ಆಗಿ ಮೂರು ವರ್ಷ ಸೇವಾವಧಿ ಪೂರ್ಣಗೊಳಿಸಿದ 72 ಮಹಿಳಾ ಪೊಲೀಸ್ ಕಾನ್‍ಸ್ಟೇಬಲ್‍ಗಳಿಗೆ ಹೆಡ್ ಕಾನ್‍ಸ್ಟೇಬಲ್ ಆಗಿ ಮುಂಭಡ್ತಿ ನೀಡಲಾಗಿದೆ.

ಈ ಸಂಬಂಧ KSRP ಎಡಿಜಿಪಿ ಅಲೋಕ್ ಕುಮಾರ್ ಅವರು ಆದೇಶ ಹೊರಡಿಸಿದ್ದು, ರಾಜ್ಯ ಪೊಲೀಸ್ ಮೀಸಲು ಪಡೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 72 ಮಹಿಳಾ ಪೊಲೀಸ್ ಕಾನ್‍ಸ್ಟೇಬಲ್‍ಗಳು ಭಡ್ತಿ ಪಡೆದಿದ್ದಾರೆ.

ಕಾನ್‍ಸ್ಟೇಬಲ್ ಹುದ್ದೆಯಲ್ಲಿ ಕೇವಲ 3 ವರ್ಷ ಸೇವಾವಧಿ ಪೂರೈಸಿದ ಮಂಜುಳಾ ಬಿ.ಹುನಗುಂಡಿ ಅವರಿಗೆ ಹೆಡ್ ಕಾನ್‍ಸ್ಟೇಬಲ್ ಆಗಿ ಪದೋನ್ನತಿ ನೀಡಲಾಗಿದೆ. ಪೊಲೀಸ್ ಇಲಾಖೆಯಲ್ಲೇ ಪ್ರಥಮ ಬಾರಿಗೆ ಕಡಿಮೆ ವರ್ಷಗಳ ಸೇವಾವಧಿಯಲ್ಲಿ ಭಡ್ತಿ ಪಡೆದ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ.

ಅದೇ ರೀತಿ, KSRP ಯ 4 ನೇ ಪಡೆಯ ಘಟಕದ ಮಹಿಳಾ ಸಿಬ್ಬಂದಿ ರಂಜಿತಾ ಮತ್ತು H R ಅನಿತಾ ಎಂಬುವರು 24ನೆ ವರ್ಷಕ್ಕೆ ಹೆಡ್‍ಕಾನ್‍ಸ್ಟೇಬಲ್ ಆಗಿ ಪದೋನ್ನತಿ ಪಡೆದಿದ್ದಾರೆ. ಇನ್ನು, 3 ವರ್ಷ ಸೇವೆ ಪೂರೈಸಿದ ಒಬ್ಬ ಮಹಿಳಾ ಪೊಲೀಸ್ ಹಾಗೂ 4 ವರ್ಷ ಸೇವೆ ಪೂರೈಸಿದ 27 ಮಂದಿ ಮತ್ತು 5 ವರ್ಷ ಸೇವೆ ಪೂರೈಸಿದ 34 ಮಹಿಳಾ ಪೊಲೀಸರು ಸೇರಿ ಒಟ್ಟು 72 ಮಹಿಳಾ ಕಾನ್‍ಸ್ಟೇಬಲ್‍ಗಳಿಗೆ ಮುಂಭಡ್ತಿ ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....