LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕ ವೃತ್ತಿಯಿಂದ ಒಂದೇ ದಿನ ನಿವೃತ್ತರಾದ ದಂಪತಿಗಳು....

ನರಗುಂದ -

ದಂಪತಿಗಳಿಬ್ಬರು ಶಿಕ್ಷಕ ವೃತ್ತಿಯಿಂದ ಒಂದೇ ದಿನ ನಿವೃತ್ತರಾದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ‌.ಹೌದು ಎಲ್ಲರಿಗೂ ಜನಮೆಚ್ಚಿ ದ ಶಿಕ್ಷಕರಾಗಿ ಹೆಸರು ಪಡೆದಿದ್ದ ಎಚ್.ಎಸ್. ಬೆಳ ಕೊಪ್ಪದ ಮತ್ತು ಪಿ.ಎಂ.ಹುಬ್ಬಳ್ಳಿ ಶಿಕ್ಷಕ ದಂಪತಿ ವೃತ್ತಿಯಿಂದ ಒಂದೇ ದಿನ ನಿವೃತ್ತರಾಗಿದ್ದಾರೆ. ಇವರಿ ಬ್ಬರೂ ಕೂಡ ನರಗುಂದ ತಾಲ್ಲೂಕಿನಲ್ಲಿ ಬರೋಬ್ಬರಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು ವಿಶೇಷ ವಾಗಿದೆ.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಬಾರಿಗೆ ಕನ್ನಡ ಭಾಷಾ ಕಲಿಕೆ ಶಿಕ್ಷಕಿಯಾಗಿ ನೇಮಕಗೊಂಡ ಹುಬ್ಬಳ್ಳಿಯವರು 18 ವರ್ಷಗಳ ಕಾಲ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದು, ಸಾವಿ ರಾರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ಮುಖ್ಯೋಪಾಧ್ಯಾಯರಾಗಿ ಬಡ್ತಿ ಹೊಂದಿ ಕುರ್ಲ ಗೇರಿ ಸರ್ಕಾರಿ ಪ್ರೌಢಶಾಲೆ ಹಾಗೂ ಪಟ್ಟಣದ ಉರ್ದು ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋ ಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ನೇಮಕಗೊಂಡ ಎಚ್.ಎಸ್. ಬೆಳಕೊಪ್ಪದ ಅವರು ಕಲಘಟಗಿ ತಾಲ್ಲೂಕಿನ ದೇವಿಕೊಪ್ಪದಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದರು. ನಂತರದ 25 ವರ್ಷಗಳ ಕಾಲ ನರಗುಂದ ತಾಲ್ಲೂ ಕಿನ ಹಿರೇಕೊಪ್ಪ ಹಾಗೂ ಕಣಕಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿದರು.ಕೊಕ್ಕೊ ತರಬೇತಿಯಲ್ಲಿ ಪರಿಣತರಾದ ಇವರು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟು ಗಳನ್ನು ರೂಪಿಸುವುದರಲ್ಲಿ ಮಹತ್ವದ ಪಾತ್ರ ವಹಿಸಿ ದ್ದಾರೆ. ಅಲ್ಲದೆ, ಇವರಿಂದ ಮಾರ್ಗದರ್ಶನ ಪಡೆದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತೀಯ ಸೇನೆ ಸೇರಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....