ಬೆಂಗಳೂರು -
7ನೇ ವೇತನ ಆಯೋಗ ಜಾರಿಗೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸೇರಿದಂತೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಗಳ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಯಾದರು.ಹೌದು ಸಂಘಟನೆಯ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತೃತ್ವದಲ್ಲಿನ ಟೀಮ್ ಭೇಟಿ ಯಾದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸೇರಿದಂತೆ
ಏಳನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕ ರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
https://youtu.be/t1D5Foz18Hw?si=QLwm6ZxfFleEGPMo
ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿ ಮಾಡಿತು.
ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆ ಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚ ಣಿಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ನಿಯೋಗ ಕೋರಿಕೆ ಸಲ್ಲಿಸಿತು.
ತೀವ್ರತರವಾದ ಏಳು ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಮನವಿ ಮಾಡಿದರು.
https://youtu.be/t1D5Foz18Hw?si=QLwm6ZxfFleEGPMo
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಏಳನೇ ವೇತನ ಆಯೋಗದ ವರದಿ ಬಂದ ಬಳಿಕ ವೇತನ ಪರಿಷ್ಕರಣೆಯ ಬಗ್ಗೆ ಅಂತಿಮ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ವಿವಿಧ ಸರ್ಕಾರಿ ನೌಕರರ ಸಂಘದ ಪದಾಧಿ ಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....