LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪೊಲೀಸ್ ಪರೀಕ್ಷೆ ಬರೆಯಲು ಹೋಗಿ - ಅಂದರ್ ಆದ ಪೊಲೀಸಪ್ಪ

ಹುಬ್ಬಳ್ಳಿ -

ಹುಬ್ಭಳ್ಳಿ - ಪೊಲೀಸ್ ಅರ್ಹತಾ ಪರೀಕ್ಷೆಯಲ್ಲಿ ಪೊಲೀಸ್ ಪೇದೆಯೋರ್ವ ಬೇರೆ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ‌. ನಗರದ ಕೆಎಲ್ ಇ ಪರೀಕ್ಷಾ ಕೇಂದ್ರದಲ್ಲಿ ಬೇರೆ ಅಭ್ಯರ್ಥಿಯ ಪರವಾಗಿ ಅಡಿವೆಪ್ಪ ಯರಗುಪ್ಪಿ ಪರೀಕ್ಷೆ ಬರೆಯಲು ಬಂದಿದ್ದರು‌‌ .ಸಂಶಯಗೊಂಡ ಪೊಲೀಸ್ ಅಧಿಕಾರಿಗಳು ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಇನ್ನೂ ಬೇರೆಯವರ ಬದಲಿಗೆ ಪರೀಕ್ಷೆ ಬರೆಯಲು ಬಂದವರು ಸಧ್ಯ ಬೆಳಗಾವಿ ಜಿಲ್ಲೆಯ ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿದ್ದಾರೆ‌. ಇವರೇ ಬೇರೆ ಅಭ್ಯರ್ಥಿಯರ ಪರವಾಗಿ ಪರೀಕ್ಷೆ ಬರೆಯಲು ಹೋಗಿ ಸಿಲುಕಿಕೊಂಡಿದ್ದಾರೆ‌.ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ನಗರದ ಗೋಕುಲ ಪೊಲೀಸ್ ಠಾಣೆ ವ್ಯಾಪ್ತಿಯ ಪರೀಕ್ಷಾ ಕೇಂದ್ರದಲ್ಲಿ ಬೇರೆ ಅಭ್ಯರ್ಥಿಯ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿದ್ದನು‌. ರಾಯಭಾಗ ಮೂಲದ ಮಣಿಕಂಠ ಎಂಬ ಅಭ್ಯರ್ಥಿ ಹೆಸರಿನಲ್ಲಿ ಹಾಜರಾಗಿದ್ದನು.

ಖಚಿತ ಮಾಹಿತಿಯ ಮೇರೆಗೆ ನೂತನವಾಗಿ ಅವಳಿನಗರಕ್ಕೆ ಆಗಮಿಸಿರುವ ಡಿಸಿಪಿ ಕೆ.ರಾಮರಾಜನ್ ಸೂಚನೆಯಂತೆ ಕಾರ್ಯಾಚರಣೆ ನಡೆದಿದ್ದು ಸುಮಾರು ಒಂದು ಗಂಟೆಯ ಹುಡುಕಾಟದ ನಂತರ ಸಿಕ್ಕಿಬಿದ್ದಿದ್ದಾನೆ ಪೋಲಿಸಪ್ಪ. ಇನ್ಸಪೆಕ್ಟರ್ ಸುರೇಶ ಕುಂಬಾರ ನೇತೃತ್ವದಲ್ಲಿ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸ್ ಅರ್ಹತಾ ಪರೀಕ್ಷೆಯಲ್ಲಿ ಬೇರೆಯವರ ಹೆಸರಿನಲ್ಲಿ ಪೊಲೀಸನೋರ್ವ ಪರೀಕ್ಷೆ ಬರೆಯುತ್ತಿದ್ದಾನೆಂಬ ಮಾಹಿತಿ, ಡಿಸಿಪಿಯವರಿಗೆ ಲಭಿಸಿದ್ದು, ಆ ಆಧಾರದ ಮೇಲೆ ಡಿಸಿಪಿ ಕೆ.ರಾಮರಾಜನ ಎರಡು ಮೂರು ತಂಡಗಳನ್ನು ಮಾಡಿ ಸೂಚನೆ ನೀಡಿದರು. ಬೆಳಿಗ್ಗೆ ಪರೀಕ್ಷೆ ಆರಂಭವಾಗುತ್ತಿದ್ದಂತೆ ಹುಡುಕಾಟ ಆರಂಭಿಸಿ, ಕೊನೆಗೆ ನಕಲಿ ಕ್ಯಾಂಡಿಟೇಟ್ ನ ಅಸಲಿ ಬಣ್ಣವನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ವಶದಲ್ಲಿರುವ ನಕಲಿ ಅಭ್ಯರ್ಥಿಯಾಗಿರುವ ಪೊಲೀಸ್ ನಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...