LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಶಿಕ್ಷಕರ ದಿನಾಚರಣೆ ಯಾಕೇ ಆಚರಣೆ ಮಾಡತಾರೆ ಗೊತ್ತಾ ದಿನಾಚರಣೆ ಕುರಿತು ಒಂದು ವಿಶೇಷ ಸ್ಟೋರಿ.....

ಬೆಂಗಳೂರು -

ಗುರುವನ್ನು ದೇವರಿಗೆ ಹೋಲಿಕೆ ಮಾಡಲಾಗುತ್ತದೆ.ಗುರು ಬ್ರಹ್ಮ, ಗುರು ವಿಷ್ಣು ಎಂದು ಹೇಳಲಾಗುತ್ತದೆ. ಗುರುವಿ ಲ್ಲದೆ ಗುರಿ ತಲುಪಲು ಸಾಧ್ಯವಿಲ್ಲ ಎಂಬ ಮಾತು ನೂರಕ್ಕೆ ನೂರು ಸತ್ಯ.ಪ್ರತಿಯೊಬ್ಬರ ಪ್ರಗತಿಯಲ್ಲಿ ಗುರುವಿನ ಪಾತ್ರ ದೊಡ್ಡದಿರುತ್ತದೆ.ವ್ಯಕ್ತಿ ಯಶಸ್ಸು ಗಳಿಸ್ಬೇಕೆಂದ್ರೆ ಗುರುವಿನ ಆಶೀರ್ವಾದ ಇರ್ಲೇಬೇಕು.

ಶಿಕ್ಷಕ ತನ್ನ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗವನ್ನು ತೋರಿಸುತ್ತಾನೆ.ಶಿಷ್ಯನಿಗೆ ಜ್ಞಾನವನ್ನು ನೀಡುತ್ತಾನೆ. ಉತ್ತಮ ಪ್ರಜೆಯಾಗಿಸಲು ಮಾರ್ಗದರ್ಶನ ನೀಡುತ್ತಾನೆ. ಮಕ್ಕಳ ಜೀವನದಲ್ಲಿ ಗುರುವಿಗೆ ವಿಶೇಷ ಪ್ರಾಮುಖ್ಯತೆ ಇದೆ.ಈ ಗುರುವಿಗೆ ಗೌರವ ನೀಡಲು ಒಂದು ದಿನವಿದೆ. ಅದೇ ಶಿಕ್ಷಕರ ದಿನ.ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ಶಿಕ್ಷಕರ ದಿನ ದಂದು ಶಿಕ್ಷಕರಿಗೆ ವಿಶೇಷ ಗೌರವ ನೀಡಲಾಗುತ್ತದೆ.ಪ್ರತಿಯೊಂದು ಶಾಲೆಗಳಲ್ಲಿ ಸಂಭ್ರಮ ದಿಂದ ಶಿಕ್ಷಕರ ದಿನ ಆಚರಿಸಲಾಗುತ್ತದೆ.ಬರೀ ಶಾಲೆಗಳಲ್ಲಿ ಮಾತ್ರವಲ್ಲ ದಾರಿ ತೋರಿದ ಗುರುವಿಗೆ ಶಿಷ್ಯರು ತಮ್ಮದೆ ರೀತಿಯಲ್ಲಿ ಗೌರವ ಸಲ್ಲಿಸುವ ದಿನವಿದು.ಪ್ರತಿ ದಿನಕ್ಕೂ ಒಂದೂ ವಿಶೇಷವಿದೆ.ಪ್ರತಿ ದಿನಕ್ಕೂ ಒಂದು ಇತಿಹಾಸವಿದೆ. ಹಾಗೆಯೇ ಶಿಕ್ಷಕರ ದಿನಕ್ಕೂ ಒಂದು ಇತಿಹಾಸವಿದೆ. ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನ ಆಚರಣೆ ಮಾಡಲಾ ಗುತ್ತದೆ.ಆದ್ರೆ ಶಿಕ್ಷಕರ ದಿನವನ್ನು ಸೆಪ್ಟೆಂಬರ್ 5ರಂದೇ ಏಕೆ ಆಚರಿಸಲಾಗುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಶಿಕ್ಷಕರ ದಿನದ ಇತಿಹಾಸದ ಬಗ್ಗೆ ವರದಿ ಇದೆ.

ಶಿಕ್ಷಕರ ದಿನದ ಇತಿಹಾಸ   ಭಾರತ ದಲ್ಲಿ ಶಿಕ್ಷಕರ ದಿನವನ್ನು ಸೆಪ್ಟೆಂಬರ್ 5ರಂದು ಆಚರಣೆ ಮಾಡಲಾಗುತ್ತದೆ.ಯುನೆಸ್ಕೋ ಅಕ್ಟೋಬರ್ 5 1994 ರಂದು ಶಿಕ್ಷಕರ ದಿನವನ್ನು ಆಚರಿಸುವಂತೆ ಘೋಷಿ ಸಿತು.ಭಾರತದಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನ ಆಚರಿಸಲು ಒಂದು ಇತಿಹಾಸವಿದೆ.

ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.ಸರ್ವಪಲ್ಲಿ ರಾಧಾಕೃಷ್ಣನ್ ಜನಿಸಿದ್ದು ಸೆಪ್ಟೆಂಬರ್ 5, 1888ರಲ್ಲಿ. ದಕ್ಷಿಣ ಭಾರತದ ತಮಿಳುನಾಡಿನ ತಿರುತ್ತಣಿ ಎಂಬಲ್ಲಿ ರಾಧಾಕೃಷ್ಣನ್ ಜನಿಸಿದ್ರು.ಸರ್ವಪಲ್ಲಿ ಎನ್ನುವುದು ರಾಧಾಕೃಷ್ಣನ್ ಮನೆತನದ ಹೆಸರು.ರಾಧಾಕೃಷ್ಣನ್ ಎನ್ನುವುದು ಅವರ ತಂದೆ ತಾಯಿ ಇಟ್ಟ ಮುದ್ದಿನ ಹೆಸರು. ಡಾ ಸರ್ವಪಲ್ಲಿ ಭಾರತದ ಮೊದಲ ಉಪರಾಷ್ಟ್ರಪತಿ ಮತ್ತು ಎರಡನೇ ರಾಷ್ಟ್ರಪತಿಯೂ ಆಗಿದ್ದರು.

ಶಿಕ್ಷಕರ ದಿನದ ಹಿಂದಿದೆ ಈ ಕಥೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಆಚರಿಸಲಾಗು ತ್ತದೆ ಎಂಬುದು ಎಲ್ಲರಿಗೂ ತಿಳದಿದೆ.ಆದರೆ ಇದರ ಹಿಂದೆ ಒಂದು ಕುತೂಹಲಕಾರಿ ಕಥೆ ಇದೆ.ಒಮ್ಮೆ ವಿದ್ಯಾರ್ಥಿಗಳು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಆಚರಿಸುವಂತೆ ಕೇಳಿಕೊಂಡರು.ಇದಕ್ಕೆ ಉತ್ತರಿಸಿದ ಸರ್ವಪಲ್ಲಿ ರಾಧಾಕೃಷ್ಣನ್ ನನ್ನ ಜನ್ಮದಿನವನ್ನು ಭಿನ್ನವಾಗಿ ಆಚರಿಸಿ ಎಂದ್ರು.ನನ್ನ ಜನ್ಮದಿನವನ್ನು ಆಚರಿಸಲು ಬಯಸುವುದು ಒಳ್ಳೆಯದು.ಆದರೆ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರು ನೀಡಿದ ಕೊಡುಗೆ ಮತ್ತು ಸಮರ್ಪಣೆಯನ್ನು ಗೌರವಿಸುವ ಮೂಲಕ ನೀವು ನನ್ನ ಜನ್ಮ ದಿನವನ್ನು ಆಚರಿಸಿದರೆ ನನಗೆ ಅತ್ಯಂತ ಸಂತೋಷವಾಗುತ್ತದೆ ಎಂದಿದ್ದರು.ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನು ಗೌರವಿಸಿ ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಆಚರಿ ಸಲಾಗುತ್ತದೆ

ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ.ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಒಂದು ಚೌಕಟ್ಟನ್ನು ನೀಡಿದವರು ಸರ್ವಪಲ್ಲಿ ರಾಧಾಕೃಷ್ಣನ್ ಅವರು.ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್.

ವರದಿ ಮಹೇಶ್ ಬೂದನೂರು ಮಂಡ್ಯ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...