LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮತ್ತೆ ಕೆಲ ಸಚಿವರ ಖಾತೆ ಅದಲು ಬದಲು - ಭಿನ್ನಮತದಿಂದ ಶಮನ ಮಾಡಲು ಬದಲಾವಣೆ

ಬೆಂಗಳೂರು -

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನದ ಅದಲು-ಬದಲು ಆಟ ಮುಂದುವರಿದಿದ್ದು, ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವರಿಬ್ಬರ ಖಾತೆ ಬದಲಾವಣೆ ಮಾಡಿದ್ದಾರೆ.

ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡ ಸಚಿವ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಸಿಎಂ ಬಿಎಸ್ವೈ ಮಾಧುಸ್ವಾಮಿ ಹಾಗೂ ಸಿ.ಪಿ ಯೋಗೇಶ್ವರ್ ಖಾತೆ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸಣ್ಣ ನೀರಾವರಿ ಇಲಾಖೆ ಪಡೆಯುವಲ್ಲಿ ಮಾಧುಸ್ವಾಮಿ ಯಶಸ್ವಿಯಾಗಿದ್ದಾರೆ.

ಮಧ್ಯಾಹ್ನ ವೈದ್ಯಕೀಯ ಖಾತೆ ಹಿಂಪಡೆದಿದ್ದ ಸಿಎಂ ಬಿಎಸ್ವೈ, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಿದ್ದರು. ಈಗ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಯೋಗೇಶ್ವರ್‌ಗೆ ನೀಡಿ, ಮಾಧುಸ್ವಾಮಿಗೆ ಸಣ್ಣ ನೀರಾವರಿ ನೀಡಿದ್ದಾರೆ.ಸಣ್ಣ ನೀರಾವರಿ ಖಾತೆಗೆ ಪಟ್ಟುಹಿಡಿದು ಮುನಿಸುಕೊಂಡಿದ್ದ ಮಾಧುಸ್ವಾಮಿ ಮುನಿಸು ಶಮನಗೊಂಡಿದೆ.

ತನ್ನ ಕೈಯಿಂದ ಜೆ.ಸಿ. ಮಾಧುಸ್ವಾಮಿಗೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆಯುವಲ್ಲಿ ಡಾ.ಕೆ.ಸುದಾಕರ್ ಇಂದು ಬೆಳಗ್ಗೆ ಯಶಸ್ವಿಯಾಗಿದ್ದರು. ಆ ಮೂಲಕ ಸುಧಾಕರ್ ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆಗೆ ವೈದ್ಯಕೀಯ ಶಿಕ್ಷಣ ಖಾತೆಯೂ ಸಿಕ್ಕಂತಾಗಿದೆ.

ಇನ್ನು ಖಾತೆ ಅದಲು-ಬದಲು ಆಗುವ ಬಗ್ಗೆ ಸೋಮವಾರ ಬೆಳಗ್ಗೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಗರಂ ಆಗಿದ್ದ ಸಚಿವ ಮಾಧುಸ್ವಾಮಿ, ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಮಾಧುಸ್ವಾಮಿಯ ಆಕ್ರೋಶ ಶಮನಕ್ಕೆ ಯತ್ನಿಸಿದ್ದ ಸಿಎಂ, ಪ್ರವಾಸೋದ್ಯಮದ ಜತೆಗೆ ಪರಿಸರ ವಿಜ್ಞಾನ ಖಾತೆಯನ್ನೂ ಕೊಟ್ಟಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...