ಹುಕ್ಕೇರಿ -
ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಕ್ಷರ ದಾಸೋಹ ಅಧಿಕಾರಿ ಜೈಲು ಸೇರಿದ್ದಾರೆ ಹೌದು ಶಿಕ್ಷಕರೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಹುಕ್ಕೇರಿ ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ ಕುಲಕರ್ಣಿ ಅವರು ನಿನ್ನೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು ಸಧ್ಯ ಎಲ್ಲಾ ಪ್ರಕ್ರಿಯೆ ಮುಕ್ತಾಯಗೊಳಿಸಿರುವ ಅಧಿಕಾರಿಗಳು ಬಲೆಗೆ ಬಿದ್ದ ಮಹಿಳಾ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದಾರೆ
ಶಾಲೆಯ ಬಿಸಿಯೂಟಕ್ಕೆ ಸಂಬಂಧಿಸಿದ ಕ್ಯಾಶ್ ಬುಕ್ ಸರಿಪಡಿಸುವ ವಿಚಾರವಾಗಿ ಶಿಕ್ಷಕರೊಬ್ಬರಿಂದ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಇದರಿಂದ ಬೇಸತ್ತ ಶಿಕ್ಷಕರು ಲೋಕಾಯುಕ್ತರಿಗೆ ದೂರು ನೀಡಿದ್ದರು.ಶಿಕ್ಷಕರ ದೂರಿನ ಆಧಾರದ ಮೇಲೆ ಕಾರ್ಯಾಚರಣೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು, ಹುಕ್ಕೇರಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಸವಿತಾ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದರು
ಎಲ್ಲಾ ವಿಚಾರಣೆ ಮುಕ್ತಾಯಗೊಳಿಸಿರುವ ಅಧಿಕಾರಿ ಗಳು ನ್ಯಾಯಾಧೀಶರ ಮುಂದೆ ಹಾಜರು ಮಾಡಿದ್ದು ಹದಿನೈದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಸುದ್ದಿ ಸಂತೆ ನ್ಯೂಸ್ ಹುಕ್ಕೇರಿ .....