LIVE TV LocalCrimeNationalInternationalPoliticsEducationTechnologyEntertainmentSportsFeature
International News

'ಕೋವಿಡ್' ಲಸಿಕೆ ಹಾಕಿಸಿಕೊಂಡಿದ್ದ ತೆಲಂಗಾಣದ ಅಂಗನವಾಡಿ ಶಿಕ್ಷಕಿ ಸಾವು

ಹೈದರಾಬಾದ್ -

ಅದ್ಯಾಕೋ ಏನೋ ಕೋವಿಡ್ ಲಸಿಕೆಯಿಂದ ಸಾವುಗಳ ಸಂಖ್ಯೆ ಕಂಡು ಬರುತ್ತಿವೆ. ಅಲ್ಲಲ್ಲಿ ಕೆಲವು ಪ್ರಕರಣಗಳು ಕಂಡು ಬರುತ್ತಿದ್ದು ಇದಕ್ಕೆ ಮತ್ತೊಂದು ಉದಾಹರಣೆ ವಾರದ ಹಿಂದೆಯಷ್ಟೇ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದ ತೆಲಂಗಾಣದ ವಾರಂಗಲ್ ಜಿಲ್ಲೆಯ 45 ವರ್ಷದ ಅಂಗನವಾಡಿ ಶಿಕ್ಷಕಿ ಸಾವು. ಆದರೆ ಇವರು ಎದೆನೋವಿನಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಾರಂಗಲ್‌ನ ಶ್ಯಾಮ್‌ ಪೇಟೆಯ ಶಿಕ್ಷಕಿ ಜನವರಿ 19ರಂದು ಲಸಿಕೆ ಹಾಕಿಸಿಕೊಂಡಿದ್ದರು.ಶನಿವಾರ ಕೆಲವು ಔಷಧಿಗಳನ್ನು ಪಡೆದಿದ್ದಾರೆ. ಬಳಿಕ ಎದೆನೋವು ಕಾಣಿಸಿಕೊಂಡಿದ್ದರಿಂದ ಮಲಗಿದ್ದಾರೆ. ಆದರೆ, ಭಾನುವಾರ ಬೆಳಗ್ಗೆ ಅವರು ಮೃತಪಟ್ಟಿ ರುವುದು ಈಗ ಬೆಳಕಿಗೆ ಬಂದಿದೆ.

ಶಿಕ್ಷಕಿಯ ಮೃತದೇಹವನ್ನು ಈಗಾಗಲೇ ಮರಣೋತ್ತರ ಪರೀಕ್ಷೆಗೆ ಮಹಾತ್ಮಾ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಕಾರಣ ಪತ್ತೆಗೆ ಪ್ರಯೋಗಾಲಯ ಮಾದರಿ ಸಂಗ್ರಹಿಸಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥ ನಾಗಾರ್ಜುನ ರೆಡ್ಡಿ ಹೇಳಿದ್ದಾರೆ.

ತೆಲಂಗಾಣ ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆದು ಎದೆನೋವು ಕಾಣಿಸಿಕೊಂಡು ಮೃತಪಟ್ಟ ಎರಡನೇ ಮಹಿಳೆಯಾಗಿದ್ದು, ನಿರ್ಮಲ್ ಜಿಲ್ಲೆಯ 42 ವರ್ಷದ ಆರೋಗ್ಯ ಕಾರ್ಯಕರ್ತರೊಬ್ಬರು ಲಸಿಕೆ ಪಡೆದ ಬಳಿಕ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದರು. ಆದರೆ, ಪ್ರಾಥಮಿಕ ಪರೀಕ್ಷೆಯಲ್ಲಿ ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ತಿಳಿದುಬಂದಿದ್ದು ಈಗ ಮತ್ತೊಬ್ಬರು ಸಾವಿಗೀಡಾಗಿದ್ದಾರೆ‌‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...