LIVE TV LocalCrimeNationalInternationalPoliticsEducationTechnologyEntertainmentSportsFeature
National News

ಬೆಲೆ ಏರಿಕೆಯಿಂದ ಕಂಗಲಾಗಿರುವ ಸಾರ್ವಜನಿಕರಿಗೆ ಮತ್ತೊಂದು ಶಾಕ್......!

ನವದೆಹಲಿ-

ನಿರಂತರವಾಗಿ ಒಂದರ ಮೇಲೆ ಒಂದರಂತೆ ಬೆಲೆ ಏರಿಕೆಯ ನಡುವೆ ಈಗ ಮೊಬೈಲ್ ಬಳಕೆದಾರರಿಗೆ ಮತ್ತೊಂದು ಶಾಕ್ ಮೊಬೈಲ್ ರಿಚಾರ್ಜ್ ದರ ಏರಿಕೆಯಾಗಲಿದ್ದು ಇದರಿಂದ ಮತ್ತೊಂದು ದೊಡ್ಡ ಪ್ರಮಾಣದಲ್ಲಿ ಶಾಕ್ ಕಾದಿದೆ.

ಹೌದು ದೇಶದಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್, ಗ್ಯಾಸ್, ದಿನಬಳಕೆ ವಸ್ತುಗಳು, ಅಗತ್ಯ ವಸ್ತುಗಳು, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಿ ಇನ್ನೂ ಜನರು ಚೇತರಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇದರ ನಡುವೆಯೇ ಮೊಬೈಲ್ ಬಳಕೆದಾರರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದೆ.

ಶೀಘ್ರದಲ್ಲೇ ಟೆಲಿಕಾಂ ಕಂಪನಿಗಳು ತಮ್ಮ ರೀಚಾರ್ಜ್ ಪ್ಲಾನ್ ಗಳ ಬೆಲೆಯನ್ನು ಹೆಚ್ಚಿಸಲಿವೆ ಎನ್ನಲಾಗಿದೆ. ಈಗ ಬಳಕೆದಾರರು ಡೇಟಾ ಮತ್ತು ವಾಯ್ಸ್ ಕಾಲಿಂಗ್ ಗಾಗಿ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ನೆಟ್ ವರ್ಕ್ ಪೂರೈಕೆದಾರ ಕಂಪನಿಗಳು ಮೊಬೈಲ್ ಟ್ಯಾರಿಫ್ ಗಳ ಬೆಲೆಯನ್ನು ಏರಿಸಲು ಹೊರಟಿವೆ ಎನ್ನಲಾಗಿದೆ.

ಮುಂದಿನ ಹಣಕಾಸು ವರ್ಷದಲ್ಲಿ ಅಂದರೆ ಏಪ್ರಿಲ್ 1 ರಿಂದ 2021-22ರ ವರೆಗೆ ನೆಟ್ ವರ್ಕ್ ಪೂರೈಕೆದಾರ ಕಂಪನಿಗಳು ತಮ್ಮ ಆದಾಯ ವೃದ್ಧಿಯನ್ನು ಹೆಚ್ಚಿಸಲು ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಬಹುದು ಎನ್ನಲಾಗಿದೆ.ಕಳೆದ ವರ್ಷ ಕೂಡ ಕೆಲವು ನೆಟ್ ವರ್ಕ್ ಪ್ರೊವೈಡರ್ ಕಂಪನಿಗಳು ತಮ್ಮ ದರವನ್ನು ಹೆಚ್ಚಿಸಿದ್ದವು.ಮುಂಬರುವ ಎರಡು ವರ್ಷಗಳಲ್ಲಿ ಟೆಲಿಕಾಂ ವಲಯದ ಉದ್ಯಮದ ಆದಾಯವು ಶೇ.11 ರಿಂದ 13 ರಷ್ಟು ಮತ್ತು 2022ರ ಆರ್ಥಿಕ ವರ್ಷದಲ್ಲಿ ಸುಮಾರು 38% ಆಗಲಿದೆ ಎನ್ನಲಾಗಿದೆ.

ಮುಂಬರುವ ಎರಡು ವರ್ಷಗಳಲ್ಲಿ ಉದ್ಯಮದ ಆದಾಯವು ಶೇಕಡಾ 11 ರಿಂದ 13 ರಷ್ಟು ಮತ್ತು ಈ ಹಣಕಾಸು ವರ್ಷದಲ್ಲಿ ಇದು ಸುಮಾರು ಶೇಕಡಾ 38 ಕ್ಕಿಂತ ಹೆಚ್ಚಾಗುತ್ತದೆ ಎನ್ನಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ಎಲ್ಲಾ ಕೈಗಾರಿಕಾ ಕ್ಷೇತ್ರದ ಮೇಲೆ ಪ್ರಭಾವ ಬೀರಿದೆ. ಆದ್ರೆ ಟೆಲಿಕಾಂ ಉದ್ಯಮದ ಮೇಲೆ ಯಾವುದೇ ಮಹತ್ವದ ಪರಿಣಾಮ ಬೀರಲಿಲ್ಲ. ಲಾಕ್ ಡೌನ್ ಸಮಯದಲ್ಲಿ ಮನೆಯಲ್ಲೇ ಇದ್ದ ಜನರು ಹೆಚ್ಚಿನ ಪ್ರಮಾಣದಲ್ಲಿ ಇಂಟರ್ನೆಟ್ ಬಳಕೆ ಮಾಡಿದ್ದನು ಇಲ್ಲಿ ನೆನಪಿಸಿಕೊಳ್ಳಬಹುದು‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...