LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಅಪಹರಣ ಬೆಂಗಳೂರಿನಲ್ಲಿ ಪತ್ತೆ - ಗೋಕುಲ ಪೊಲೀಸರ ಯಶಸ್ವಿ ಕಾರ್ಯಕ್ಕೆ ಮೆಚ್ಚುಗೆ.....

ಹುಬ್ಬಳ್ಳಿ -

ಮಾರುಕಟ್ಟೆಗೆ ಕರೆದುಕೊಂಡು ಹೋಗೊದಾಗಿ ಹೇಳಿ ಬಾಲಕಿಯೊಬ್ಬಳನ್ನು ಅಪಹರಣ ಮಾಡಿದ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದೆ‌. ಹೌದು ನಗರದ ರಾಮ ಲಿಂಗೇಶ್ವರ ನಗರದಲ್ಲಿ ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಮಗುವನ್ನು ಗೋಕುಲ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಆರೋಪಿ ಯನ್ನು ಬಂಧಿಸಿದ್ದಾರೆ.ಸ್ಥಳೀಯ ನಿವಾಸಿ ಶಬನಂ ಗದಗಕರ ಬಂಧಿತ ಯುವತಿಯಾಗಿದ್ದಾರೆ.ಶನಿವಾರ ಮಧ್ಯಾಹ್ನ ಪಕ್ಕದ ಮನೆಯ ಅಸ್ಲಾಂ ಬಳ್ಳಾರಿ ಅವರ ಮಗುವನ್ನು ಮಾರುಕಟ್ಟೆಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದಳು.

ಅಸ್ಲಾಂ ಅವರು ಗೋಕುಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ತಕ್ಷಣ ತನಿಖೆ ಕೈಗೊಂಡ ಪೊಲೀ ಸರಿಗೆ,ಮೊಬೈಲ್ ಟವರ್ ಆಧಾರದಲ್ಲಿ ಆರೋಪಿ ಬೆಂಗಳೂರಿನಲ್ಲಿ ಇರುವುದು ತಿಳಿದು ಬಂತು.
ವಿಶೇಷ ತಂಡ ರಚಿಸಿ ಮಾಹಿತಿ ಸಂಗ್ರಹಿಸಿದ ಪೊಲೀಸರಿಗೆ,ಶಬನಂ ಬೆಂಗಳೂರಿನ ಯುವಕನನ್ನು ಮದುವೆಯಾಗಿ,ವಿಚ್ಛೇದನ ಪಡೆದು ಮಂಡ್ಯದ ವ್ಯಕ್ತಿಯ ಜೊತೆ ಸ್ನೇಹದಲ್ಲಿರುವುದು ತಿಳಿದು ಬಂದಿತ್ತು.ಶಬನಂ ಮಗುವಿನ ಜೊತೆ ಅವನಲ್ಲಿಗೆ ತೆರಳುತ್ತಿರುವ ಮಾಹಿತಿ ಆಧರಿಸಿ,ಪೊಲೀಸರು ಅವನನ್ನು ಸಂಪರ್ಕಿಸಿ ಸಹಕಾರ ಕೋರಿದ್ದರು.

ಆಗ,ಅವನು ಶಬನಂಗೆ ಮೆಜೆಸ್ಟಿಕ್ ಬಸ್ ನಿಲ್ದಾಣದ ಆರನೇ ಪ್ಲಾಟ್ ಫಾರ್ಮ್ ನಲ್ಲಿ ಇರಲು ತಿಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದ.ಅದೇ ವೇಳೆ ಕಮಿಷನರ್ ಲಾಬೂರಾಮ್,ಬೆಂಗಳೂರಿನ ಚಿಕ್ಕಪೇಟೆ ಎಸಿಪಿ ಹಾಗೂ ಉಪ್ಪಾರಪೇಟೆ ಪೊಲೀಸ್ ಸಿಬ್ಬಂದಿ ಸಹಾಯ ಕೇಳಿ, ಮಗು ಹಾಗೂ ಆರೋಪಿ ಫೋಟೊವನ್ನು ಅವರ ವಾಟ್ಸ್'ಆ್ಯಪ್'ಗೆ ಕಳುಹಿಸಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಬೆಂಗಳೂರು ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಬೆಂಗಳೂರಿಗೆ ತೆರಳಿದ ಗೋಕುಲ ಠಾಣೆ ಪೊಲೀ ಸರು ಆರೋಪಿಯನ್ನು ಬಂಧಿಸಿ,ಮಗು ವನ್ನು ಹುಬ್ಬಳ್ಳಿಗೆ ಕರೆತಂದಿದ್ದಾರೆ.ಮಗುವನ್ನು ಯುವತಿ ಅಪಹರಣ ಮಾಡಿದ್ದು ಯಾಕೆ,ಅವಳು ಅದೇ ಕೃತ್ಯದಲ್ಲಿಯೇ ಭಾಗಿಯಾಗಿರುವ ಆರೋಪಿಯೇ ಎನ್ನುವ ಕುರಿತು ತನಿಖೆ ನಡೆಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...