LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕನ ಮೇಲೆ ಅಟ್ಯಾಕ್ ಬುದ್ದಿ ಹೇಳಲು ಮುಂದಾದ ಶಿಕ್ಷಕ ಚಿಕ್ಕ ತಿಮ್ಮಯ್ಯ ರ ಮೇಲೆ ಹಲ್ಲೆ.....

ಬೆಂಗಳೂರು -

ಸಮಾಜಮುಖಿ ಕೆಲಸ ಮಾಡಲು ಹೋದ ಶಿಕ್ಷಕನೊಬ್ಬ ಪೆಟ್ರೋಲ್ ಬಂಕ್ ಸಿಬ್ಬಂದಿಯಿಂದ ಹಲ್ಲೆಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಾಲಕಾರ್ಮಿಕ ಎಂದು ಶಂಕಿಸಿ ಪ್ರಶ್ನಿಸಿದ ಶಿಕ್ಷಕನ ಮೇಲೆ ಬಂಕ್ ನಲ್ಲಿ ಕೆಲಸ‌ ಮಾಡುತ್ತಿದ್ದ ಸಿಬ್ಬಂದಿ ಹಲ್ಲೆ ಮಾಡಿರುವ ಆರೋಪ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ಶಿಕ್ಷಕ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ವಿಚಾರಣೆ ಮಾಡಿದ್ದು ಜೈನ್ ವಿದ್ಯಾಸಂಸ್ಥೆಯಲ್ಲಿ‌ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಚಿಕ್ಕತಿಮ್ಮಯ್ಯ ಎಂಬುವವರು ಮೇ 27 ರಂದು ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಳ್ಳಲು ರಚನಾ ‌ಇಂಡಿಯನ್‌ ಆಯಿಲ್‌ ಪೆಟ್ರೋಲ್ ಬಂಕ್ಗೆ ಹೋಗಿದ್ದರು‌.ಪೆಟ್ರೋಲ್ ಹಾಕುತ್ತಿದ್ದ ಸಿಬ್ಬಂದಿ‌ ಬಾಲಕನಂತೆ ಕಂಡು ಬಂದಿದ್ದರಿಂದ ಆತನಿಂದ ವಿವರ ಪಡೆದಿದ್ದಾರೆ.ಇದಲ್ಲದೇ, ವಯೋಮಿತಿ ದೃಢೀಕರಣಕ್ಕೆ ಬಂಕ್ ಮ್ಯಾನೇಜರ್ ಮಾದೇಶ್ ಬಾಲಕನ‌ ಆಧಾರ್ ಕಾರ್ಡ್ ಹಾಗೂ ಮಾರ್ಕ್ಸ್ ಕಾರ್ಡ್ ನೀಡುವಂತೆ‌‌ ಪ್ರಶ್ನಿಸಿದ್ದಾರೆ‌.ಇದರಿಂದ ಕೆರಳಿದ ಬಂಕ್ ನಲ್ಲಿ ಕೆಲಸ ಮಾಡು ತ್ತಿದ್ದ ಗುಂಪು ಶಿಕ್ಷಕನ ಮೇಲೆ ಹಲ್ಲೆ ನಡೆಸಿದೆ.ಬಂಕ್ ಮಾಲೀಕ‌ ದೇವರಾಜ್ ಬರುವವರೆಗೂ ಬೈಕ್ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.ಇದಾದ ಬಳಿಕ ಮಾಲೀಕ ದೇವರಾಜ್ ಸ್ಥಳಕ್ಕೆ ಬಂದು ವಿಚಾರಿಸಿದ್ದಾನೆ.ಆತನೂ ಕೂಡ ಶಿಕ್ಷಕನ ಮೇಲೆ ಏಕಾಏಕಿ ದಾಳಿ ಮಾಡಿ ಥಳಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾ ಗಿದೆ.ಸ್ಥಳದಿಂದ ತಪ್ಪಿಸಿಕೊಂಡ ಶಿಕ್ಷಕ ಬ್ಯಾಟರಾಯನಪುರ‌ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ಶಿಕ್ಷಕ ನೀಡಿದ ದೂರಿನ‌ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ‌ ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....