LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸಿಬಿಟಿಯಲ್ಲಿ ಕೊರೊನಾ ವೈರಾಣು ವೇಷಧಾರಿ - ಮಾಸ್ಕ್ ಧರಿಸಲು ಜಾಗೃತಿ

ಧಾರವಾಡ - ಕೊರೊನಾ ವೈರಾಣು ನಿಯಂತ್ರಣಕ್ಕೆ ಮಾಸ್ಕ್ ಧರಿಸುವಿಕೆ , ದೈಹಿಕ ಅಂತರ ಪಾಲನೆ ಅತ್ಯಗತ್ಯ. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ನಿರಂತರ ಪ್ರಯತ್ನ ಮಾಡುತ್ತಿವೆ. ಜಾಗೃತಿ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಿಸಲು ಕೊರೊನಾ ವೈರಾಣು ವೇಷಧಾರಿಯೊಬ್ಬರು ಧಾರವಾಡ ಪ್ರದೇಶಗಳಲ್ಲಿ ಕಾಣಿಸಿಕೊಂಡರು.

ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರ ಪರಿಕಲ್ಪನೆಯಲ್ಲಿ ಈ ಕಾರ್ಯ ಕೈಗೊಂಡಿದ್ದು, ಪ್ರತಿನಿತ್ಯ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ವೇಳೆಯಲ್ಲಿ ಕಲಾವಿದರೊಬ್ಬರನ್ನು ಬಳಸಿಕೊಂಡು

ಅವರಿಗೆ ಕೊರೊನಾ ವೈರಾಣು ವೇಷ ಹಾಕಿಸಿ, ಜನ ನಿಬಿಡ ಸ್ಥಳಗಳಲ್ಲಿ ಹಠಾತ್ ಕಳಿಸಿ, ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆಗೆ ಕರೆತರುವ ಕಾರ್ಯಾಚರಣೆ ಇಂದಿನಿಂದ ಜಿಲ್ಲೆಯಲ್ಲಿ ಈ ಕಾರ್ಯ ಪ್ರಾರಂಭವಾಗಿದೆ.

ನಾದಝೇಂಕಾರ ಸಂಸ್ಥೆಯ ಯಮನಪ್ಪ ಜಾಲಗಾರ ಅವರು ತಮ್ಮ ತಂಡದ ಬಸವರಾಜ ಗುಡ್ಡಪ್ಪನವರ ಅವರಿಗೆ ಕೊರೊನಾ ವೇಷ ತೊಡಿಸಿ , ಜನರ ಮಧ್ಯೆ ಕಳಿಸುತ್ತಿದ್ದಾರೆ. ಪ್ರಸಾದನ ಕಲಾವಿದ ಸಂತೋಷ ಮಹಾಲೆ ಈ ವೇಷ ಭೂಷಣ ಸಿದ್ಧಪಡಿಸಿದ್ದಾರೆ.


ಈ ಒಂದು ವಿಶೇಷವಾದ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಒಟ್ಟಾರೆ ಕರೋನ ಮಹಾಮಾರಿಯನ್ನು ನಿಯಂತ್ರಿಸುವ ಸಲುವಾಗಿ ಹೀಗೆ ವಿಭಿನ್ನವಾಗಿ ಕಾರ್ಯಕ್ರಮ ಹಮ್ಮಿಕೊಂಡಿರುವ ಜಿಲ್ಲಾಧಿಕಾರಿ ಕಾರ್ಯ ಇವಕ್ಕೆ ಸಾಥ್ ನೀಡಿದ ಆರೋಗ್ಯ ಇಲಾಖೆಯ ಪ್ರಯತ್ನ ಮೆಚ್ಚುವಂತದ್ದು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...