LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಹೊಡೆತಕ್ಕೆ BEO ಅಮಾನತು.....ಬೆಚ್ಚಿಬಿದ್ದ ಇಲಾಖೆ.....

ಉಡುಪಿ -

ಶಿಕ್ಷಕರಿಗೆ ಬಡ್ತಿ ನೀಡುವ ವಿಚಾರ ದಲ್ಲಿ ನಿರ್ಲಕ್ಷ್ಯ ವಹಿಸಿದ ಮತ್ತು ಮೇಲಾಧಿಕಾರಿಗಳು ಹೇಳಿದರು ಸರಿಯಾಗಿ ಕರ್ತವ್ಯ ನಿರ್ವಹಣೆ ಮಾಡದ ಹಿನ್ನೆಲೆ ಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಒಬ್ಬರನ್ನು ಅಮಾನತು ಮಾಡಲಾಗಿದೆ ಹೌದು ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಯಲ್ಲಮ್ಮ ಸೇವೆಯಿಂದ ಅಮಾನತು ಆದವರಾಗಿದ್ದಾರೆ ಶಿಕ್ಷಕರ ಬಡ್ತಿ ಪ್ರಕ್ರಿಯೆಗೆ ಸಂಬಂಧಿ ಸಿದಂತೆ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿ ರುವ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.news_1791697316_1_533.webp

 

news_1791697315_0_732.webp

ಉಡುಪಿ ಜಿಲ್ಲೆಯಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಉಪನ್ಯಾಸಕರ ಹುದ್ದೆಗೆ ಬಡ್ತಿ ಪಡೆಯಲು ಒಟ್ಟು 74 ಶಿಕ್ಷಕರು ಅರ್ಹತೆ ಹೊಂದಿದ್ದರು ಈ ಪೈಕಿ 70 ಶಿಕ್ಷಕರ ಪೂರ್ಣ ಪ್ರಸ್ತಾವನೆಯನ್ನು ಇಲಾಖೆಗೆ ಸಲ್ಲಿಸಲಾಗಿತ್ತು ಆದರೆ ಉಳಿದ 4 ಶಿಕ್ಷಕರ ಪ್ರಸ್ತಾವನೆಗಳನ್ನು ಸಲ್ಲಿಸುವಲ್ಲಿ ಶ್ರೀಮತಿ ಯಲ್ಲಮ್ಮ ಅವರು ಅನಗತ್ಯ ವಿಳಂಬ ಧೋರಣೆ ಅನುಸರಿಸಿ ದ್ದಾರೆ ಎಂಬ ಆರೋಪ ಮತ್ತು ಶಿಕ್ಷಕರಿಂದ ಸಾಕಷ್ಟು ಪ್ರಮಾಣದಲ್ಲಿ ದೂರುಗಳು ಕೂಡಾ ಬಂದಿದ್ದವು ಹೀಗಾಗಿ ಆದೇಶದಲ್ಲಿ ಉಲ್ಲೇಖ ಮಾಡಿ ಆದೇಶ ಮಾಡಲಾಗಿದೆ

ಅರ್ಹ ಶಿಕ್ಷಕರ ಕಾರ್ಯನಿರ್ವಹಣಾ ವರದಿ ಹಾಗೂ ಅಗತ್ಯ ದಾಖಲೆಗಳಿಗೆ ಸಹಿ ಮತ್ತು ಮೊಹರು ಮಾಡಿ ಕಳುಹಿಸಿಕೊಡುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚಿಸಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ.
ಹಿಂತಿರುಗಿಸಲಾಗಿದ್ದ 4 ಪ್ರಸ್ತಾವನೆಗಳ ಆಕ್ಷೇಪಣೆ ಗಳನ್ನು ಸರಿಪಡಿಸಿ ತಕ್ಷಣ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲಜವಾಬ್ದಾರಿಯುತ ಹುದ್ದೆಯಲ್ಲಿ ಇದ್ದುಕೊಂಡು ಮೇಲಧಿಕಾರಿಗಳಿಗೆ ಸೂಕ್ತ ವಿವರಣೆ ನೀಡದೆ ಉದ್ದೇಶಪೂರ್ವಕವಾಗಿ ವಿಳಂಬ ನೀತಿ ಅನುಸರಿಸಿದ್ದರಿಂದ ಅರ್ಹ ಶಿಕ್ಷಕರು ಬಡ್ತಿಯಿಂದ ವಂಚಿತರಾಗುವ ಸಾಧ್ಯತೆ ಎದುರಾಗಿತ್ತು. ಇದು ಮೇಲ್ನೋಟಕ್ಕೆ ಗಂಭೀರ ಕರ್ತವ್ಯ ಲೋಪ ಎಂದು ಸಾಬೀತಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಪ್ರಸ್ತಾವನೆ ಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರ ಶಿಸ್ತು ಕ್ರಮ ಬಾಕಿ ಇರಿಸಿ ಶ್ರೀಮತಿ ಯಲ್ಲಮ್ಮ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸ ಆಜ್ಞಾಪಿಸಿದೆ.(ಸರ್ಕಾರದ ಆದೇಶ ಸಂಖ್ಯೆ: ಇಪಿ 40 ಡಿಜಿಒ 2026 ಬೆಂಗಳೂರು, ದಿನಾಂಕ: 09ನೇ ಅಕ್ಟಪರಿಶೀಲಿಸಿದ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು: ಸರ್ಕಾರದ ಆದೇಶ
ಬೆಂಗಳೂರು: ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಸುದ್ದಿ ಸಂತೆ ನ್ಯೂಸ್ ಉಡುಪಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST