ಬೆಂಗಳೂರು -
ವಿನಯ್ ಕುಲಕರ್ಣಿಗೆ ಬಿಗ್ ಡೇ; ಜಾಮೀನು ರದ್ದಾಗಿ ಮತ್ತೆ ಜೈಲು ಪಾಲಾಗ್ತಾರಾ ಶಾಸಕ ಹೌದು ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್ನಲ್ಲಿ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡುವಂತೆ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ಇಂದು ಅರ್ಜಿ ವಿಚಾರಣೆ ನಡೆಯಲಿದೆ.
ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆಈ ಅರ್ಜಿಯ ಮಹತ್ವದ ವಿಚಾರಣೆಯು ಅಕ್ಟೋಬರ್ 9, 2026 ರಂದು ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಲಿದ್ದು ಇಂದೇ ಆದೇಶ ಹೊರಬೀಳುವ ಸಾಧ್ಯತೆ ಇದೆ
ಹಿಂದಿನ ವಿಚಾರಣೆಗಳ ವೇಳೆ ಸಾಕ್ಷ್ಯನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪಗಳ ಹಿನ್ನೆಲೆಯಲ್ಲಿ "ಕೊಲೆ ಆರೋಪಿಗಳು ವಿಧಾನ ಸಭೆಯಲ್ಲಿ ಇರಬೇಕೇ?" ಎಂದು ನ್ಯಾಯಪೀಠವು ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಿನಯ್ ಕುಲಕರ್ಣಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಸುಪ್ರೀಂ ಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸ ಲು ನಿರಾಕರಿಸಿದ್ದು ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.
ಕಳೆದ ಬಾರಿ ವಿಚಾರಣೆ ವೇಳೆ ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದ್ದಸುಪ್ರೀಂಕೋರ್ಟ್ಈ ರೀತಿ ಕೊಲೆಯಲ್ಲಿ ಭಾಗಿಯಾದವರು ವಿಧಾನಸಭೆಯಲ್ಲಿ ಇರಬೇಕಾ? ಗಂಭೀರ ಆರೋಪಗಳಿರುವ ವ್ಯಕ್ತಿಗಳು ವಿಧಾನಸಭೆ ಯಲ್ಲಿ ಇರಲು ಅರ್ಹರೇ.? ಇಂತವರನ್ನು ಅನರ್ಹ ಮಾಡಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಶಾಸಕ ವಿನಯ್ ಕುಲಕರ್ಣಿ ಎದೆ ಯಲ್ಲಿ ಈಗ ಭಯ ಶುರುವಾಗಿದೆ.
2016ರಲ್ಲಿ ನಡೆದ ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ ಪ್ರಕರಣದ ತನಿಖೆ ನಡೆಸಿದ ಸಿಬಿಐ (CBI) ವಿಶೇಷ ನ್ಯಾಯಾಲಯವು ಏಪ್ರಿಲ್ 2026 ರಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳನ್ನು ದೋಷಿ ಎಂದು ಘೋಷಿಸಿ ಜೀವಾ ವಧಿ ಶಿಕ್ಷೆ ವಿಧಿಸಿತ್ತು.
ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಜುಲೈ 2026 ರಲ್ಲಿ ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು ಮತ್ತೆ ಸಧ್ಯ ಈಗ ಎಲ್ಲರ ಚಿತ್ತ ನ್ಯಾಯಾಲಯದತ್ತ ಆಗಿದ್ದು ಏನಾಗಲಿದೆ ಏನೋ ಎಂಬ ದೊಡ್ಡ ಪ್ರಮಾಣದಲ್ಲಿ ಆತಂಕ ಎದುರಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....