Also read
ಬೆಂಗಳೂರು -
Also read
ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಆಯೋಗ ದಿನಾಂಕವನ್ನು ಘೋಷಣೆ ಮಾಡಿದೆ. ಏಪ್ರಿಲ್ 17 ರಂದು ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿದೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಮಾರ್ಚ್ 31 ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 2 ಚುನಾವಣಾ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.