LIVE TV LocalCrimeNationalInternationalPoliticsEducationTechnologyEntertainmentSportsFeature
State News

ನವೆಂಬರ್ 18 ರಿಂದ ಶಾಲಾ-ಕಾಲೇಜು ಬಂದ್‌ಗೆ ಕರೆ.....ಬಂದ್ ಗೆ ಕರೆ ನೀಡಿದ ಹೋರಾಟ ಸಮನ್ವಯ ಸಮಿತಿ.....

ಶಿರಸಿ -

ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಹಾಗೂ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿ ಸುವಲ್ಲಿ ರಾಜ್ಯ ಸರ್ಕಾರ ನಿರಂತರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ನ.18ರಿಂದ ಶಾಲಾ ಕಾಲೇಜುಗಳನ್ನು ಅನಿರ್ದಿಷ್ಟಾವಧಿ ಬಂದ್ ಮಾಡಿ ಬೃಹತ್ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ' ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಗಳ ಹಾಗೂ ನೌಕರರ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ಬಸವರಾಜ ಹೊರಟ್ಟಿ ತಿಳಿಸಿದರು.

ಶಿರಸಿ ಯಲ್ಲಿ ಮಾತನಾಡಿದ ಅವರು 'ಕಳೆದೆರಡು ತಿಂಗಳಿನಿಂದ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಸರ್ಕಾರ ಯಾವುದೇ ಧನಾತ್ಮಕ ಸ್ಪಂದಿಸಿಲ್ಲ. ಸರ್ಕಾರಿ ಶಾಲೆಗಳಂತೆಯೇ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ನಾಡಿನ ಶೈಕ್ಷಣಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರೂ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಶಿಕ್ಷಕರು ಮತ್ತು ನೌಕರರು ಮೂಲಭೂತ ಸೇವಾ ಭದ್ರತೆ ಹಾಗೂ ಪಿಂಚಣಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕ ಹಾಗೂ ಬೆಳಗಾವಿ ವಿಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಶೇ‌ 70ರಷ್ಟು ಬೋಧಕ ಹುದ್ದೆಗಳು ಖಾಲಿಯಿದ್ದು, ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ತೀವ್ರ ಪೆಟ್ಟು ಬೀಳುತ್ತಿದೆ. ಸರ್ಕಾರಿ ಶಾಲೆಗಳಿಗೆ ನೀಡುವ ಸೌಲಭ್ಯಗಳು ಮತ್ತು ನಿಯಮಗಳಲ್ಲಿ ಸರ್ಕಾರ ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳ ವಿರುದ್ಧ ತಾರತಮ್ಯ ಧೋರಣೆ ತಳೆದಿದೆ ಈ ಎಲ್ಲಾ ಅನ್ಯಾಯಗಳನ್ನು ಖಂಡಿಸಿ ನ.17ರಂದು ಧಾರವಾಡ ದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ' ಎಂದರು.

ಸಮಿತಿಯ ಪ್ರಮುಖರಾದ ಶಶಿಭೂಷಣ ಹೆಗಡೆ, ಟಿ.ಎಸ್.ಹಳೆಮನಿ, ಜಿ.ಟಿ.ಭಟ್, ಜಿ.ಆರ್.ಭಟ್, ನಾರಾಯಣ ದೈಮನೆ ಸೇರಿದಂತೆ ಹಲವಾರು ಉಪಸ್ಥಿತರಿದ್ದರುಬಸವರಾಜ ಹೊರಟ್ಟಿ, ಅಧ್ಯಕ್ಷ, ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಹಾಗೂ ನೌಕರರ ಹೋರಾಟ ಸಮನ್ವಯ ಸಮಿತಿ 18 ರಿಂದ ಉತ್ತರ ಕರ್ನಾಟಕ ಸೇರಿದಂತೆ 16 ಜಿಲ್ಲೆಗಳ ಖಾಸಗಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುತ್ತಿದೆ

ಸುದ್ದಿ ಸಂತೆ ನ್ಯೂಸ್ ಶಿರಸಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವೆಂಬರ್ 18 ರಿಂದ ಶಾಲಾ-ಕಾಲೇಜು ಬಂದ್‌ಗೆ ಕರೆ.....ಬಂದ್ ಗೆ ಕರೆ ನೀಡಿದ ಹೋರಾಟ ಸಮನ್ವಯ ಸಮಿತಿ.....ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಸರ್ಕಾರಿ ನೌಕರರು.....ವೇತನಕ್ಕೆ ತಕ್ಕ ಬದ್ಧತೆ ತೋರಿಸಿ ಸರ್ಕಾರಿ ಶಿಕ್ಷಕರಿಗೆ ಸಿಎಂ ಕಿವಿಮಾತು.....ಉಚಿತ ಹೋಮ್ ಡೆಲಿವರಿ.....ಗ್ರಾಹಕರಿಗೆ Big Mishra ದೀಪಾವಳಿ ಹಬ್ಬದ ಸಿಹಿ ಕೊಡುಗೆ.....ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ.....ಕಂಬನಿ ಮಿಡಿದ ನಾಡಿನ ಶಿಕ್ಷಕ ಬಂಧುಗಳು.....ರಾಜ್ಯ ಸರ್ಕಾರಿ ನೌಕರರಿಗೆಸಂತಸವನ್ನುಂಟು ಮಾಡಿದ CM ಒಪ್ಪಿಗೆ..... ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳ ಜೋಡಣೆ..... ಆತಂಕ ತಂದಿಟ್ಟ ಸರ್ಕಾರದ ನಡೆ.....ಬಾಗಲಕೋಟೆ ಅಪರ ಜಿಲ್ಲಾಧಿಕಾರಿಯಾಗಿ ಮಂಜುನಾಥ ಡೊಂಬರ ಅಧಿಕಾರ ಸ್ವೀಕಾರ ಸಹಪಾಠಿಗಳಿಂದ ಆತ್ಮೀಯ ಸನ್ಮಾನ – ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ಸ್ನೇಹಬಳಗ.....ಸರ್ಕಾರಿ ಶಾಲಾ ಮಕ್ಕಳ ಕೆಲಸ ವೈರಲ್..... ರಾಜ್ಯವೇ ಮೆಚ್ಚವಂತಹ ಕೆಲಸ ಮಾಡಿದ ಸರ್ಕಾರಿ ಶಾಲಾ ಮಕ್ಕಳು.....ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಹೊಸ ಜವಾಬ್ದಾರಿ ನೀಡಿದ ಸರ್ಕಾರ..... ಹೊಸ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ.....