LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಪ್ರಾಧ್ಯಾಪಕರ ಪರೀಕ್ಷೆ ಯಲ್ಲೂ ಅಕ್ರಮ - ಕೆಲವೊಂದಿಷ್ಟು ಅಭ್ಯರ್ಥಿ ಗಳಿಗೆ ಸಿಸಿಬಿ ನೋಟೀಸ್.....

ಬೆಂಗಳೂರು -

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ನಡೆಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಅಂಕಗಳ ಪಟ್ಟಿ ಬಿಡುಗಡೆ ಮಾಡಿದ್ದು ಇದರ ಬೆನ್ನಲ್ಲೇ ‍ಪ್ರಶ್ನೆಗಳ ಸೋರಿಕೆ ಪ್ರಕರಣದಲ್ಲಿ ಕೆಲವು ಅಭ್ಯರ್ಥಿಗಳಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.ರಾಜ್ಯದಾದ್ಯಂತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಒಎಂಆರ್‌ ಪ್ರತಿಗಳ ಮೌಲ್ಯಮಾಪನ ಮುಕ್ತಾಯಗೊಳಿಸಿರುವ ಕೆಇಎ ಸ್ಪರ್ಧಾತ್ಮಕ ಪರೀಕ್ಷೆಯ ವಿಷಯವಾರು ಅಂಕಪಟ್ಟಿಯನ್ನು ಜಾಲತಾಣದಲ್ಲಿ ಪ್ರಕಟಿಸಿದೆ.ಇನ್ನೂ ಭೂಗೋಳ ವಿಜ್ಞಾನ ವಿಷಯದ ಪ್ರಶ್ನೆಗಳ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಅನುಮಾನಾಸ್ಪದ ಅಭ್ಯರ್ಥಿಗಳ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ.

ಒಎಂಆರ್ ಪ್ರತಿ ನೀಡದಿದ್ದಕ್ಕೆ ಮತ್ತೊಮ್ಮೆ ಪತ್ರ ಮಾರ್ಚ್‌ 14ರಂದು ನಡೆದಿದ್ದ ಭೂಗೋಳ ವಿಜ್ಞಾನ ವಿಷಯ ಪರೀ ಕ್ಷೆಯ 18 ಪ್ರಶ್ನೆಗಳು ಪರೀಕ್ಷೆಗೂ ಮುನ್ನವೇ ಸೋರಿಕೆ ಆಗಿದ್ದವು.ಈ ಬಗ್ಗೆ ಮಲ್ಲೇಶ್ವರ ಠಾಣೆಗೆ ಕೆಇಎ ಕಾರ್ಯನಿ ರ್ವಾಹಕ ನಿರ್ದೇಶಕಿ ಎಸ್ ರಮ್ಯಾ ದೂರು ನೀಡಿದ್ದರು.

ಪ್ರಶ್ನೆಗಳನ್ನು ಸೋರಿಕೆ ಮಾಡಿದ್ದ ಆರೋಪದಡಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ರಾಗಿದ್ದ (ಮೌಲ್ಯಮಾಪನ) ಪ್ರೊ. ಎಚ್‌. ನಾಗರಾಜ್ ಹಾಗೂ ಅವರ ಪಿಎಚ್‌ಡಿ ವಿದ್ಯಾರ್ಥಿ ಆರ್.ಸೌಮ್ಯಾ ಅವರನ್ನು ಈಗಾಗಲೇ ಬಂಧಿಸಲಾಗಿದೆ.ಅಕ್ರಮ ಎಸಗಿದ್ದ ಅನುಮಾನದಡಿ ಇಬ್ಬರು ಅಭ್ಯರ್ಥಿಗಳ ಒಎಂಆರ್ ಪ್ರತಿ ನೀಡುವಂತೆ ಕೆಇಎಗೆ ಪತ್ರ ಬರೆಯಲಾಗಿತ್ತು. ಮೌಲ್ಯಮಾ ಪನ ನೆಪ ಹೇಳಿದ್ದ ಕೆಇಎ,ಇದುವರೆಗೂ ಒಎಂಆರ್‌ ನೀಡಿಲ್ಲ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಲಭ್ಯವಿರುವ ಮಾಹಿತಿ ಆಧರಿಸಿ 10ಕ್ಕೂ ಹೆಚ್ಚು ಅಭ್ಯರ್ಥಿ ಗಳ ಪಟ್ಟಿ ಸಿದ್ಧಪಡಿಸಲಾಗಿದೆ.ಅವರೆಲ್ಲರಿಗೂ ನೋಟಿಸ್ ನೀಡಲಾಗಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾ ಗಿದೆ.ಸಿಸಿಬಿಯ ಎಸಿಬಿ ನೇತೃತ್ವದ ತಂಡ ಅಭ್ಯರ್ಥಿಗಳ ವಿಚಾರಣೆ ನಡೆಸಲಿದೆ.ಅವರ ಹೇಳಿಕೆ ಪರಿಶೀಲಿಸಿದ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದು ಅಂಕಪಟ್ಟಿ ಬಿಡುಗಡೆಯಾಗಿರುವುದರಿಂದ ಅಭ್ಯರ್ಥಿಗಳ ಒಎಂಆರ್ ಪ್ರತಿ ನೀಡುವಂತೆ ಕೆಇಎಗೆ ಮತ್ತೊಮ್ಮೆ ಪತ್ರ ಬರೆಯಲಾಗುವುದು.ಅದಕ್ಕೆ ಪ್ರತಿಕ್ರಿಯೆ ನೀಡದಿದ್ದರೆ ಕಾನೂನು ಪ್ರಕಾರ ಅಧಿಕಾರಿಗಳಿಗೆ ನೋಟಿಸ್ ನೀಡಲಾ ಗುವುದು ಎಂದೂ ಹೇಳಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

'

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...