ಬೀದರ್ -
ತಡವಾಗಿ ಬಂದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಿಇಒ ಹೌದು ಇಂತಹ ದೊಂದು ಘಟನೆ ಬೀದರ್ ನಲ್ಲಿ ನಡೆದಿದೆ.ಕಚೇರಿಗೆ ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಅವರು ಬಿಸಿ ಮುಟ್ಟಿಸಿ ದ್ದಾರೆ.ಕಚೇರಿಗೆ ದಿಢೀರ್ ಭೇಟಿ ನೀಡಿ 'ರಿಯಾಲಿಟಿ ಚೆಕ್' ನಡೆಸಿದ ಅವರು, ವಿಳಂಬವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಳಿಯೇ ನಿಲ್ಲಿಸಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಅಧಿಕಾರಿಗಳ ಕರ್ತವ್ಯ ನಿಷ್ಠೆ ಕುರಿತು ರಿಯಾಲಿಟಿ ಚೆಕ್ ಮಾಡಲು ಮುಂದಾದ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಅವರು, ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಜಿ.ಪಂ. ಕಚೇರಿಗೆ ಆಗಮಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಬಂದು ತಮ್ಮ ಆಸನಗಳಲ್ಲಿ ಕುಳಿತಿದ್ದಾರೆಯೇ ಎಂದು ಪರಿಶೀಲನೆ ನಡೆಸಿದರು. ಆದರೆ, ಬಹುತೇಕ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಚೇರಿಗೆ ಹಾಜರಾಗದೆ ತಮ್ಮ ಮನಸೋ ಇಚ್ಛೆ ಬರುತ್ತಿರುವುದನ್ನು ಗಮನಿಸಿದರು.
ಖುದ್ದಾಗಿ ಗೇಟ್ ಬಳಿ ನಿಂತ ಸಿಇಒ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಸಮಾಧಾನಗೊಂಡ ಸಿಇಒ ತಕ್ಷಣವೇ ಜಿಲ್ಲಾ ಪಂಚಾಯತ್ ಕಚೇರಿಯ ಮುಖ್ಯ ಗೇಟ್ ಅನ್ನು ಮುಚ್ಚಿಸಿದರು. ಬಳಿಕ ತಾವೇ ಖುದ್ದಾಗಿ ಗೇಟ್ ಬಳಿ ನಿಂತು, ತಡವಾಗಿ ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸಾಲಾಗಿ ನಿಲ್ಲಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.ಕರ್ತವ್ಯ' ಆಯಪ ಬಳಕೆ ಕಡ್ಡಾಯ ಸಮಯಕ್ಕೆ ಸರಿಯಾಗಿ ಕಚೇರಿಗೆ ಏಕೆ ಬಂದಿಲ್ಲ?' ಎಂದು ಪ್ರಶ್ನಿಸಿದ ಸಿಇಒ, ಒಂದು ವೇಳೆ ಅಧಿಕಾರಿಗಳು ಕ್ಷೇತ್ರ ಭೇಟಿಗೆ (ಫೀಲ್ಡ್ ವರ್ಕ್) ಹೋಗಿದ್ದಲ್ಲಿ, ಆ ಬಗ್ಗೆ 'ಕರ್ತವ್ಯ' ಆಯಪನಲ್ಲಿ ದಾಖಲಿಸಿದ್ದೀರಾ? ಎಂದು ಕಟುವಾಗಿ ಪ್ರಶ್ನಿಸಿ, ವಿಳಂಬಕ್ಕೆ ಸೂಕ್ತ ಕಾರಣ ನೀಡುವಂತೆ ಸೂಚಿಸಿದರು.
ಅಲ್ಲದೆ, ಪ್ರತಿಯೊಬ್ಬರೂ ಕಡ್ಡಾಯವಾಗಿ 'ಕರ್ತವ್ಯ' ಆಯಪ್ ಮೂಲಕವೇ ನಿಗದಿತ ಸಮಯಕ್ಕೆ ಹಾಜರಾತಿ ದಾಖಲಿಸಬೇಕು ಇಲ್ಲವಾದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ಪ್ರತಿದಿನ ಜಿ.ಪಂ.ನ ಎಲ್ಲಾ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕು. ಮುಂದಿನ ದಿನಗಳಲ್ಲಿ ಮತ್ತೆ ಇದೇ ರೀತಿ ತಪ್ಪು ಮರುಕಳಿಸಿದರೆ ಯಾವುದೇ ಸಮಜಾಯಿಷಿ ಕೇಳದೆ ನೇರವಾಗಿ ಒಂದು ದಿನದ ವೇತನ ಕಡಿತಗೊಳಿಸಲಾಗುವುದು' ಎಂದು ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದರು.
ಸುದ್ದಿ ಸಂತೆ ನ್ಯೂಸ್ ಬೀದರ್......