LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಮಕ್ಕಳ ಕುರಿತು ತಿಳುವಳಿಕೆ ಕಾರ್ಯಕ್ರಮ ಕಿಶೋರ ಮಕ್ಕಳನ್ನು ಕೆಲಸಕ್ಕೆ ನೇಮಿಸಿ ಕೊಂಡರೆ ಶಿಕ್ಷಾರ್ಹ ಅಪರಾಧ.....

ಧಾರವಾಡ -

ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರು ಅಶೋಕ ಯರಗಟ್ಟಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ದೀಪಾ ಜಾವೂರ ಇವರ ನೇತೃತ್ವದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡದೊಂದಿಗೆ ಧಾರವಾಡ ಶಹರದ ಸೂಪರ್ ಮಾರ್ಕೆಟ್, ತರಕಾರಿ ಮಾರುಕಟ್ಟೆ, ಗಾಂಧಿ ಚೌಕ್, ನೆಹರೂ ಮಾರ್ಕೆಟ್‍ನ ಪ್ರಮುಖ ಸ್ಥಳಗಳಲ್ಲಿ ತರಕಾರಿ ಮತ್ತು ಇತರೆ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಿ ಮತ್ತೆ ತರಕಾರಿ ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಲಾಯಿತು.

ಸಾರ್ವಜನಿಕರಿಗೆ 1986ರ ಬಾಲ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರ ಅನ್ವಯ 14 ವರ್ಷದೊಳಗಿನ ಯಾವುದೇ ಮಗು ಯಾವುದೇ ಕೆಲಸದಲ್ಲಿ ತೊಡಗು ವಂತಿಲ್ಲ.14 ವರ್ಷ ಮೇಲ್ಪಟ್ಟು 18 ವರ್ಷದೊಳಗಿನ ಕಿಶೋರ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವಂತಿಲ್ಲ ಇದು ಶಿಕ್ಷಾರ್ಹ ಅಪರಾಧ ವಾಗಿದೆ.ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ರೂ.50,000 ವರೆಗೆ ದಂಡ 6 ತಿಂಗಳಿಂದ 2 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು.

ಎಂದು ತಿಳಿಸಿ ಕೊವೀಡ್-19 ಮುಂಜಾಗ್ರತಾ ಕ್ರಮ ಗಳ ಕುರಿತು ಸಹ ಅರಿವು ಮೂಡಿಸಿ ಮಕ್ಕಳನ್ನು ಹೊರಗಡೆ ಕಳುಹಿಸದಂತೆ ತಿಳಿಸಲಾಯಿತು.
ಈ ತಂಡದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಶ್ವೇತಾ ಕಿಲ್ಲೇದಾರ, ಕರೆಪ್ಪ ಕೌಜಲ ಗಿ, ವಿಶಾಲಾ ಕಾನಪೇಟ, ಮಹಮ್ಮದಲಿ ತಹಶೀ ಲ್ದಾರ ಹಾಗೂ ಭಾರತಿ ಬಂಡಿ ಉಪಸ್ಥಿತರಿದ್ದರು.


Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...