LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗೆದ್ದು ಬನ್ನಿ ಭಾರತೀಯ ಸೈನಿಕರೇ ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ - ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಸಾಯಿ ಮಂದಿರದಲ್ಲಿ ಪೂಜೆ ಪ್ರಾರ್ಥನೆ.....

ಹುಬ್ಬಳ್ಳಿ -

ಆಪರೇಷನ್ ಸಿಂಧೂರ ಕೈಗೊಂಡ ಭಾರತೀಯ ಸೈನಿಕರು ಗೆದ್ದು ಬರಲಿ ಎಂದು ವಿಶೇಷ ವಾದ ಪೂಜೆ ಆರಾಧನೆ ದೇಶದೆಲ್ಲೆಡೆ ನಡೆಯುತ್ತಿದ್ದು ಇತ್ತ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಂಡು ಬಂದಿತು ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಈ ಒಂದು ವಿಶೇಷ ಪೂಜೆ ಮತ್ತು ಆರಾಧನೆ ಯನ್ನು ಮಾಡಲಾಯಿತು

ಪಹಲ್ಗಾಮ್
ಭಯೋತ್ಪಾದಕರ ದಾಳಿಯಲ್ಲಿ ಮನೆಯ ಸದಸ್ಯರನ್ನು ಕಳೆದುಕೊಂಡ ಹೆಣ್ಣುಮಕ್ಕಳ ಹಣೆಯಲ್ಲಿನ ಸಿಂಧೂರವೂ ಅಳಿಸಿಹೋಗಿದೆ. ಹೆಣ್ಣು ಮಕ್ಕಳ ಕುಂಕುಮ ಭಾಗ್ಯ ಕಸಿದ ಉಗ್ರರ ಹೇಯ ಕೃತ್ಯದ ವಿರುದ್ಧ ಸಿಡಿದೆದ್ದ ಭಾರತ ಇದೇ ಕಾರಣಕ್ಕೆ ಪಹಲ್ಲಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿದ ಪತ್ರಿದಾಳಿಗೆ ''ಆಪರೇಷನ್ ಸಿಂಧೂರ್'' ಎಂದು ನಾಮಕರಣ ಮಾಡಿ ಪಾಕಿಸ್ತಾನದ ಉಗ್ರರ ಎದೆಯೊಳಗೆ ಭಾರತ ದೇಶದ ಸಿಂಧೂರದ ಗುಂಡು ನುಗ್ಗಿಸಿದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ

ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೋಕಾಕ ಅವರ ನೇತೃತ್ವದಲ್ಲಿ ಸಾಯಿ ಮಂದಿರದಲ್ಲಿ ಈ ಒಂದು ಕಾರ್ಯ ಮಾಡಲಾಯಿತು.ಪಾಕಿಸ್ತಾನದ ಒಟ್ಟು ಒಂಬತ್ತು ಸ್ಥಳಗಳಾದ ಬಹವಾಲ್ಪುರ್, ಮುರಿಡೈ, ಗುಲ್ಪುರ್, ಭಿಂಬ‌ರ್, ಚಕ್ ಅಮ್ರು, ಬಾಗ್, ಕೋಟ್ಲಿ, ಸಿಯಾಲ್ಗೊಟ್ ಮತ್ತು ಮುಜಫರಾಬಾದ್ ಮೇಲೆ ನಿಖರವಾದ ದಾಳಿಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.

ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿ ಮತ್ತು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನ ಅಡಗು ತಾಣಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದ್ದು ಈ ಒಂದು ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

ಯುದ್ಧದ ಮುನ್ನುಡಿ ಇಷ್ಟು ಭಯಂಕರವಾಗಿದೆ ಅಂದ್ರೆ ಮುಂದೆ ಪಾಕಿಸ್ತಾನದ ನಕಾಶವನ್ನು ತೆಗಿಯುವಂತ ಸಂಕಲ್ಪ ಎಷ್ಟು ಭಯಂಕರಾಗಿರುತ್ತೆ ಅಂತ ಈಗ ಅರ್ಥವಾಗುತ್ತದೆ ಹಾಗಾಗಿ ಸುರಕ್ಷಿತವಾಗಿ ಗೆದ್ದು ಬಂದು ಭಾರತ ಮಡಿಲಲ್ಲಿ ಸೇರಲಿ ಅಂತ ನಮ್ಮ ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಸತ್ಯ ಸಾಯಿಬಾಬಾ ಮಂದಿರದಲ್ಲಿ
ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಪೂಜೆಯನ್ನು ಸಲ್ಲಿಸಲಾಯಿತು

ವಿಜಯೋತ್ಸವದ ಕಾರ್ಯಕ್ರಮದಲ್ಲಿ ಸುರೇಶ ಗೋಕಾಕ, ಕಿರಣ್ಉಪ್ಪಾರ,ಅಶೋಕ ಹಾದಿಮನಿ
ಮಹೇಶ ಹೆಬ್ಬಳ್ಳಿ, ಚೇತನ್ ವಿಜಯ ಉರ್ಕಡ್ಲಿ
ಪವನ ಶಿರೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....