ಬೆಂಗಳೂರು -
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಕಣ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿದ್ದು ಈ ಒಂದು ನಡುವೆ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಮತದಾರರಿಗೆ ಬಹಿರಂಗವಾಗಿ ಆಮಿಷ ಒಡ್ಡುತ್ತಿದ್ದು ಚುನಾವಣಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಿಯೋಗವು ಪ್ರಾದೇಶಿಕ ಚುನಾವಣಾಧಿಕಾರಿಗಳಿಗೆ ಗಂಭೀರ ದೂರು ಸಲ್ಲಿಸಿದೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರ ರಾಗಿರುವ ಶಿಕ್ಷಕರಿಗೆ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಗಿಫ್ಟ್ ಕೂಪನ್ ಕಾರ್ಡ್‌ಗಳನ್ನು ಹಂಚುವ ಮೂಲಕ ಮತ ಸೆಳೆಯಲು ಆಮಿಷವೊಡ್ಡುತ್ತಿದ್ದಾರೆ.
ದಸರಾ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಜಾರೋಷವಾಗಿ ಬೆಂಗಳೂರಿನ ಎಲ್ಲಾ ಶಿಕ್ಷಕ ಮತದಾರರಿಗೆ ಉಡುಗೊರೆ ಕೂಪನ್‌ಗಳನ್ನು ವ್ಯವಸ್ಥಿತವಾಗಿ ವಿತರಿಸಲಾಗುತ್ತಿದೆ ನಗರದ ವಿವಿಧೆಡೆ ಈ ಕೂಪನ್‌ಗಳನ್ನು ಹಂಚಲಾಗುತ್ತಿದ್ದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಹಾಗೂ ಗಂಭೀರ ಉಲ್ಲಂಘನೆ ಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
'ಶಿಕ್ಷಕರಂತಹ ಪ್ರಬುದ್ಧ ಮತದಾರರಿಗೇ ಆಮಿಷವೊಡ್ಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಲಾಗುತ್ತಿದೆ. ಪುಟ್ಟಣ್ಣ ಅವರ ಈ ಕೃತ್ಯದ ಬಗ್ಗೆ ತಕ್ಷಣ ತನಿಖೆ ನಡೆಸಿ, ಅವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ ಚುನಾವಣಾ ಅಪರಾಧ ಪ್ರಕರಣ ದಾಖಲಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಬಿಜೆಪಿ ಕಾನೂನು ಸಲಹೆ ಗಾರ ವಸಂತ್ ಕುಮಾರ್ ಒತ್ತಾಯಿಸಿದ್ದಾರೆ.
ಈ ದೂರಿನಿಂದಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಅಖಾಡದಲ್ಲಿ ರಾಜಕೀಯ ಜಟಾಪಟಿ ಮತ್ತಷ್ಟು ತೀವ್ರಗೊಂಡಿದೆ. ಚುನಾವಣಾಧಿಕಾರಿಗಳು ಈ ದೂರನ್ನು ಪರಿಗಣಿಸಿ ಮುಂದಿನ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....