ಶಿವಮೊಗ್ಗ -
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅಸಮಾಧಾನ ಆಕ್ರೋಶ ಹೆಚ್ಚಾಗುತ್ತಿದ್ದು ಇವರ ವಿರುದ್ಧ ಮುಖ್ಯಮಂತ್ರಿ ಗೆ ದೂರು ನೀಡಲು ಕಾಂಗ್ರೆಸ್ ಪಕ್ಷದ ನಾಯಕರು ಮುಂದಾಗಿದ್ದಾರೆ ಹೌದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಖಾಡದಲ್ಲಿ ಆಂತರಿಕ ಅಸಮಾಧಾನ ಮತ್ತು ಬಂಡಾಯದ ಬೆಂಕಿ ಮತ್ತೊಮ್ಮೆ ಧಗಧಗನೆ ಉರಿಯತೊಡಗಿದೆ. ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದು, ಪಕ್ಷದ ಆಂತರಿಕ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್.ಎಂ. ಮಂಜುನಾಥ್ ಗೌಡ ಅವರ ಬಗ್ಗೆ ತಾವು ಆಡಿದ್ದ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧದ ತಮ್ಮ ಆಕ್ಷೇಪಾರ್ಹ ಹೇಳಿಕೆಗಳಿಗೆ ಇಂದಿಗೂ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ
ಸಚಿವ ಮಧು ಬಂಗಾರಪ್ಪ ತಮ್ಮ ವರ್ತನೆಯನ್ನು ತಕ್ಷಣವೇ ತಿದ್ದುಕೊಳ್ಳಬೇಕು ಎಂದು ಆಗ್ರಹಿಸಿದ ಸುಂದರೇಶ್, ಮಧು ಬಂಗಾರಪ್ಪ ಅವರು ತಮ್ಮ ತಂದೆ ಮಾಜಿ ಸಿಎಂ ಬಂಗಾರಪ್ಪನವರ ಹೆಸರನ್ನು ದುರುಪ ಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದಈ ವಿಷಯಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಡಿಸಿಎಂ ಪರಮೇಶ್ವರ್ ಅವರಿಗೆ ಅಧಿಕೃತ ದೂರು ನೀಡುವುದಾಗಿ ಪುನರುಚ್ಚರಿಸಿದರು ಇದೇ ವೇಳೆ, ವಸೂಲಿ ದಂಧೆಯಲ್ಲಿ ತೊಡಗಿದ್ದಾರೆ ಎನ್ನಲಾದ ಸ್ಥಳೀಯ ನಾಯಕರ ಕುರಿತಾದ ಹೇಳಿಕೆಗೆ ತಾವು ಬದ್ಧವಾಗಿರುವುದಾಗಿ ಪುನರುಚ್ಚರಿಸಿದರು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....