ಮಾನ್ವಿ -
ಉಪಹಾರ ಸೇವನೆಯ ನಂತರ ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ಮಾನ್ವಿ ಯಲ್ಲಿ ನಡೆದಿದೆ ಮುಷ್ಟೂರ ರಸ್ತೆಯಲ್ಲಿರುವ ಅಲ್ಪ ಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಬಳಿಕ 34 ವಿದ್ಯಾರ್ಥಿ ಗಳು ಅಸ್ವಸ್ಥಗೊಂಡಿದ್ದಾರೆ.
ವಸತಿ ನಿಲಯದಲ್ಲಿ ಬೆಳಗಿನ ಉಪಾಹಾರಕ್ಕೆ ವಗ್ಗರಣೆ ತಯಾರಿಸಲಾಗಿದ್ದು, ಸೇವನೆ ಬಳಿಕ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಹಾಗೂ ಭೇದಿ ಕಾಣಸಿಕೊಂಡಿದೆ.
12 ಬಾಲಕಿಯರು ಹಾಗೂ 22 ಬಾಲಕರನ್ನು ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಡಾ. ಶರಣಪ್ಪ ಬಲ್ಲಟಗಿ, ಪಾಂಡುರಂಗ ಮತ್ತು ಜೈನಾಬೀ ಎಂಬ ಇಬ್ಬರು ವಿದ್ಯಾರ್ಥಿಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ 10 ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ವಸತಿಶಾಲೆಗೆ ಹಿಂದಿರುಗಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಸುದ್ದಿ ಸಂತೆ ನ್ಯೂಸ್ ಮಾನ್ವಿ.....