LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಾರ್ಟ್ ಸರ್ಕ್ಯೂಟ್ - ಹೊತ್ತಿ ಉರಿದ ಕೋಟ್ಯಾಂತರ ರೂಪಾಯಿ ಹತ್ತಿ

ಧಾರವಾಡ - ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಪಾರ ಪ್ರಮಾಣದ ಹತ್ತಿ ಬೆಂಕಿಗೆ ಆಹುತಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಅಗ್ನಿ ಅವಘಡ ನಡೆದಿದೆ. ಕೀರ್ತಿ ಕಾಟನ್ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಕಂಪನಿಯಲ್ಲಿ ಬೆಂಕಿ‌ ದುರಂತ ಸಂಭವಿಸಿದೆ.

ಕೈಗಾರಿಕೆಯ ಪಕ್ಕದಲ್ಲಿ ಹೈ ವೊಲ್ಟೇಜ್ ವಿದ್ಯುತ್ ತಂತಿ ಕಂಬಗಳಿವೆ. ಇದರಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಿಡಿಯೊಂದು ಹತ್ತಿಯ ಮೇಲೆ ಬಿದ್ದಿದೆ . ಒಂದು ಸಣ್ಣ ಬೆಂಕಿಯ ಕಿಡಿ ಕಾಟನ್ ಮಿಲ್ ನಲ್ಲಿನ ಎಲ್ಲಾ ಹತ್ತಿ ಹಂಡಿಗೆಗಳಿಗೆ ಹತ್ತಿಕೊಂಡಿದೆ.

ನೋಡು ನೋಡುತ್ತಲೆ ಮಿಲ್ ನಲ್ಲಿರುವ ಎಲ್ಲಾ ಹತ್ತಿ ಹಂಡಿಗೆಗಳು ಬೆಂಕಿಗೆ ಆಹುತಿಯಾಗಿವೆ. ಶ್ರೀಶೈಲ ನಾಗಪ್ಪ ಗೋಕಾವಿ ಎಂಬುವರಿಗೆ ಈ ಒಂದು ಕಾಟನ್ ಮಿಲ್ ಸೇರಿದೆ. ಬರೊಬ್ಬರಿ ಒಂದೂವರೆ ಕೋಟಿ ರೂಪಾಯಿ ಬೆಲೆಬಾಳುವ ಹತ್ತಿ ಹಂಡಿಗೆಗಳು ಸುಟ್ಟ ಕರಕಲಾಗಿವೆ.

ತಡವಾಗಿ ಬೆಂಕಿಯನ್ನು ನೋಡಿದ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

ಇನ್ನೂ ಈ ಒಂದು ಬೆಂಕಿಯ ಅವಘಡಕ್ಕೆ ವಿದ್ಯುತ್ ತಂತಿಗಳೇ ಕಾರಣವಾಗಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೀರ್ತಿ ಕಾಟನ್ ಮಿಲ್ ಮಾಲೀಕರಾದ ಶ್ರೀಶೈಲ ಗೋಕಾವಿ ಒತ್ತಾಯಿಸಿದ್ದಾರೆ.

ಇನ್ನೂ ಈ ಒಂದು ವಿಷಯ ತಿಳಿದ ಗರಗ ಪೊಲೀಸ್ ಠಾಣೆ ಸಿಬ್ಬಂದಿ ಕೂಡಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....