ಶಿವಮೊಗ್ಗ -
ಜ್ವರದಿಂದ ಬಳಲುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಉಪಕರಣಗಳ ಕೊರತೆಯೇ ಬಾಲಕಿಯ ಸಾವಿಗೆ ಕಾರಣ ಎಂದು ಪೋಷಕರು ಮತ್ತು ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಶ್ವೇತಾ ಎಂದು ಗುರುತಿ ಸಲಾಗಿದ್ದು ಮೂಲತಃ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹಳಿಯಾಳ ಮಟ್ಟಿಕ್ಯಾಂಪ್ ನಿವಾಸಿ ಯಾಗಿದ್ದಾಳೆ. ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಪ್ರಸ್ತುತ ಈ ವಸತಿ ಶಾಲೆ ಯಲ್ಲಿ ಒಟ್ಟು 235 ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ.
ಕಳೆದ ಆರು ದಿನಗಳ ಹಿಂದೆ ತೀವ್ರ ಜ್ವರದಿಂದ ಅಸ್ವಸ್ಥಗೊಂಡಿದ್ದ ಶ್ವೇತಾಳನ್ನು ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಿಸಿಕೊಂಡ ವೈದ್ಯಾಧಿಕಾರಿಗಳು ಬಾಲಕಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕುಟುಂಬಸ್ಥರುಆರೋಪಿಸಿದ್ದಾರೆ ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಗಳು ಲಭ್ಯವಿಲ್ಲದೆ, ಬಹುತೇಕ ಔಷಧಿಗಳನ್ನು ಹೊರಗಿನಿಂದ ತರಿಸಿ ಕೊಳ್ಳಲಾಗುತ್ತಿತ್ತು. ಇದರಿಂದಾಗಿ ಬಾಲಕಿ ದಿನದಿಂದ ದಿನಕ್ಕೆ ನಿತ್ರಾಣಗೊಂಡಿದ್ದಳು
ಚಿಕಿತ್ಸೆ ವೇಳೆ ಬಾಲಕಿಯ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದು, ಆಕೆಗೆ ತಕ್ಷಣ ಡಯಾಲಿಸಿಸ್ ಮಾಡುವ ಅಗತ್ಯತೆ ಎದುರಾಗಿತ್ತು. ಆದರೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ಗೆ ಅಗತ್ಯವಾದ 'ಟ್ಯೂಬಿಂಗ್ ಸೆಟ್' ಲಭ್ಯವಿಲ್ಲದೆ ವೈದ್ಯರು ಪರದಾಡಿದ್ದಾರೆ. ಪರಿಣಾಮ ವಾಗಿ ಸಕಾಲದಲ್ಲಿ ಡಯಾಲಿಸಿಸ್ ಮಾಡಲು ಸಾಧ್ಯ ವಾಗದೆ ಬಾಲಕಿ ಕೋಮಾ ಸ್ಥಿತಿಗೆ ಜಾರಿದ್ದಳು ಎಂದು ತಿಳಿದುಬಂದಿದೆ.
ಮೆಗ್ಗಾನ್‌ನಲ್ಲಿ ಸ್ಥಿತಿ ಚಿಂತಾಜನಕವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದರು ಅದರಂತೆ ಪೋಷಕರು ಖಾಸಗಿ ಅಂಬುಲೆನ್ಸ್ ಮೂಲಕ ಶ್ವೇತಾ ಳನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಮಣಿಪಾಲ ಆಸ್ಪತ್ರೆಯ ಸನಿಹ ತಲುಪುತ್ತಿದ್ದಂ ತೆಯೇ ಬಾಲಕಿ ಮಾರ್ಗಮಧ್ಯೆ ಕೊನೆಯುಸಿರೆ ಳೆದಿದ್ದಾಳೆ.
ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಆವರಣದಲ್ಲಿ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. "ಮೆಗ್ಗಾನ್ ಆಸ್ಪತ್ರೆ ವೈದ್ಯರ ಬೇಜವಾಬ್ದಾರಿ ಹಾಗೂ ಆಸ್ಪತ್ರೆಯಲ್ಲಿ ಮೂಲಸೌಕರ್ಯ, ಉಪಕರಣಗಳ ಕೊರತೆಯೇ ನಮ್ಮ ಮಗಳ ಸಾವಿಗೆ ನೇರ ಕಾರಣ" ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳಿಕ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದ್ದು, ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ......