ಬೆಂಗಳೂರು -
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯ ಹಿನ್ನೆಲೆಯಲ್ಲಿ, ಅರ್ಹ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ದಿನಾಂಕ 23.10.2026ರ ಶುಕ್ರವಾರದಂದು ಒಂದು ದಿನದ "ವಿಶೇಷ ಸಾಂದರ್ಭಿಕ ರಜೆ" ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ರಾಜ್ಯ ಶಿಷ್ಟಾಚಾರ) ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಈ ಅಧಿಸೂಚನೆಯನ್ನು ಹೊರಡಿಸಿದೆ. ಭಾರತ ಚುನಾವಣಾ ಆಯೋಗವು ದಿನಾಂಕ 23.10.2026ರ ಶುಕ್ರವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಒಟ್ಟು 4 ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆಯನ್ನು ಘೋಷಿಸಿದೆ ಈ ಪೈಕಿ ಕರ್ನಾಟಕ ಆಗ್ನೇಯ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಗಳು ಮತ್ತು ಕರ್ನಾಟಕ ಈಶಾನ್ಯ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳು ಸೇರಿವೆ.
ಈ ನಿಗದಿತ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನದ ಹಕ್ಕು ಹೊಂದಿರುವ ಅರ್ಹ ಪದವೀಧರ ಹಾಗೂ ಶಿಕ್ಷಕ ಮತದಾರರಿಗೆ ಮಾತ್ರ ಮತ ಚಲಾಯಿಸಲು ಈ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗ ಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.ಸದರಿ ವಿಧಾನ ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ಅಥವಾ ಮತದಾರರು ಈ ಸೌಲಭ್ಯವನ್ನು ಪಡೆಯಲು ಷರತ್ತು ವಿಧಿಸಲಾಗಿದೆ. ಮತದಾರರು ತಮ್ಮ ಸಂಬಂಧಪಟ್ಟ ಕಚೇರಿ ಮುಖ್ಯಸ್ಥರು ಅಥವಾ ಅಧಿಕಾರವುಳ್ಳ ಸಕ್ಷಮ ಪ್ರಾಧಿಕಾರಗಳಿಂದ ನಿಯಮಾನುಸಾರ ಪೂರ್ವಾನು ಮತಿಯನ್ನು ಕಡ್ಡಾಯವಾಗಿ ಪಡೆಯುವ ಷರತ್ತಿ ಗೊಳಪಟ್ಟು ಈ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸೂಚಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....