ಹಾಸನ -
ಈಗಾಗಲೇ ರಾಜ್ಯದಲ್ಲಿ ಶಾಲೆಗಳಿಗೆ3ರಿಂದ 21ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ ಸಧ್ಯ ಘೋಷಿಸಿರುವ ದಸರಾ ರಜೆ ಅವಧಿಯಲ್ಲಿ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲಾ ಚಟುವಟಿಕೆ ಹಾಗೂ ಪರೀಕ್ಷೆ ನಡೆಸುತ್ತಿರುವ ಕುರಿತು ದೂರು ಬಂದಿದ್ದು, ಸರ್ಕಾರಿ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ತಪ್ಪಿತಸ್ಥ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀರಾಮ ಸೇನೆ ಜಿಲ್ಲಾ ಘಟಕದ ಸದಸ್ಯರು ಮನವಿ ಸಲ್ಲಿಸಿದರು.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶ ಕರಿಗೆ ಮನವಿ ಸಲ್ಲಿಸಿರುವ ಸದಸ್ಯರು ಸರ್ಕಾರಿ ರಜೆ ಅವಧಿಯಲ್ಲಿ ಶಾಲೆಗಳನ್ನು ನಡೆಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಒತ್ತಾಯಿ ಸಿದರು.ರಜೆ ಅವಧಿಯಲ್ಲಿ ತರಗತಿ,ಪರೀಕ್ಷೆ ಅಥವಾ ಇತರ ಕಡ್ಡಾಯ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುವ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಅಗತ್ಯವಿದ್ದಲ್ಲಿ ಶಾಲೆಗಳ ಹಾಜರಾತಿ ದಾಖಲೆ, ಪರೀಕ್ಷಾ ವೇಳಾಪಟ್ಟಿ, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಸೇರಿದಂತೆ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದರು.
ದಸರಾ ಕರ್ನಾಟಕದ ಪ್ರಮುಖ ಸಾಂಸ್ಕೃತಿಕ ಆಚರಣೆಯಾಗಿದ್ದು, ವಿದ್ಯಾರ್ಥಿಗಳು ಕುಟುಂಬ ಹಾಗೂ ಸಮಾಜದೊಂದಿಗೆ ಬೆರೆತು ಸಂಸ್ಕೃತಿ, ಪರಂಪರೆ ಅರಿಯಲು ರಜೆ ಸಹಕಾರಿ. ರಜೆ ಅವಧಿ ಯಲ್ಲಿ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಮೇಲೆ ಅನಗತ್ಯ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಸರ್ಕಾರಿ ರಜೆ ಆದೇಶವನ್ನು ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸುವಂತೆ ಲಿಖಿತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಶ್ರೀರಾಮ ಸೇನೆ ರಾಜ್ಯ ಸಹ ಕಾರ್ಯದರ್ಶಿ ಹೇಮಂತ್ ಜಾನೇಕೆರೆ, ದರ್ಶನ್, ಜಗದೀಶ್, ಮಹೇಶ್, ಪ್ರದೀಪ್, ಧನು ಇದ್ದರು.
ಸುದ್ದಿ ಸಂತೆ ನ್ಯೂಸ್ ಹಾಸನ.....