LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉದ್ಘಾಟನೆಗೆ ಸಿದ್ದಗೊಂಡ ಧಾರವಾಡದ IIT ಪ್ರಥಮ ಪ್ರಜೆ ರಾಷ್ಟ್ರಪತಿ ಅವರಿಂದ ಲೋಕಾರ್ಪಣೆ

ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿದೆ ಹೌದು ಸಂಸ್ಥೆಯ ಲೋಕಾರ್ಪಣಾ ಕಾರ್ಯಕ್ರಮ ನೆಪ್ಟೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ.ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸ್ಥೆಯನ್ನು ಉದ್ಘಾಟಿಸಿಲಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರತಿನಿಧಿಗಳು,ಕೈಗಾರಿಕಾ ಪಾಲುದಾರರಾದ ಕಿಯಾನಿಕ್ಸ್,ಇನ್ಫೋಸಿಸ್‍ನ ಪ್ರತಿನಿಧಿಗಳು,ಕಾಲೇಜಿನ ಬೋರ್ಡ್ ಆಫ್ ಗವರ್ನರ್ಸ್,ಸೆನಟ್,ಹಣಕಾಸು ಸಮಿತಿ,ಕಟ್ಟಡ ಮತ್ತು ಕಾಮಗಾರಿ ಸಮಿತಿಯವರು,ಪ್ರತಿಷ್ಠಿತ ಸಂಸ್ಥೆಗಳ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಕಾರ್ಯಕ್ರಮಕ್ಕೆ ಆಗಮಿಸುವರು. ಧಾರವಾಡದಲ್ಲಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯು ಸಾರ್ವಜನಿಕ ಖಾಸಗಿ-ಕೈಗಾರಿಕಾ ಪಾಲುದಾರಿಕೆಯ ಮಾದರಿಯಲ್ಲಿ ಭಾರತ ಸರಕಾರ,ಕರ್ನಾಟಕ ಸರಕಾರ ಹಾಗೂ ಕೈಗಾರಿಕಾ ಸಂಸ್ಥೆಯಾದ ಕಿಯೋನಿಕ್ಸ್ ಇವುಗಳ ಸಹಭಾಗಿತ್ವದೊಂ ದಿಗೆ 2015 ಲ್ಲಿ ಅಸ್ತಿತ್ವಕ್ಕೆ ಬಂತು.ದೇಶದಲ್ಲಿ ಮಾಹಿತಿ ತಂತ್ರಜ್ಞಾನ ಉನ್ನತ ಶಿಕ್ಷಣ,ವೃತ್ತಿಪರ ಪರಿಣತಿ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಉದ್ದೇಶಕ್ಕೆ ಈ ಸಂಸ್ಥೆಯನ್ನು ಸ್ಥಾಪಿಸಲಾಯಿತು.2017 ಸಂಸತ್ತಿನ 23 ನೇ ಕಾಯ್ದೆಯಡಿಯಲ್ಲಿ ಈ ಸಂಸ್ಥೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯೆಂದು ಘೋಷಿಸಲಾಗಿದೆ.ಹೊಸ ಹುರುಪಿನಲ್ಲಿ ಆರಂಭವಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡಕ್ಕೆ ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ,ಶೈಕ್ಷಣಿಕ ಮತ್ತು ಸಂಶೋಧನಾ ಸಮುದಾಯಕ್ಕೆ ಬದಲಾವಣೆ ತರುವಂತಹ ಅಪರೂಪದ ಅವಕಾಶವನ್ನು ಹೊಂದಿದೆ.ಹುಬ್ಬಳ್ಳಿ-ಧಾರವಾಡ ಅವಳಿ ನಗರವು ಈಗಾಗಲೇ ಉತ್ತರ ಕರ್ನಾಟಕದಲ್ಲಿ ತಾಂತ್ರಿಕ, ಕೃಷಿ, ವೈದ್ಯಕೀಯ,ಕಾನೂನು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಉತ್ಕøಷ್ಟ ಶೈಕ್ಷಣಿಕ ಸಂಸ್ಥೆಯನ್ನು ಹೊಂದಿದ್ದು, ಶೈಕ್ಷಣಿಕ ನಗರಿ ಎಂದು ಪ್ರಸಿದ್ಧಿ ಪಡೆದಿದೆ. ವಾತಾವರಣದೊಂ ದಿಗೆ ಬೆಂಗಳೂರಿಗೂ ಹತ್ತಿರವಾಗಿದ್ದು ಐಐಐಟಿ ಧಾರವಾಡ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಬೆಳೆಯುತ್ತಿದೆ. ಹಿಂದಿನ ಶೈಕ್ಷಣಿಕ ವರ್ಷದಲ್ಲಿ 834 ವಿದ್ಯಾರ್ಥಿಗಳಿದ್ದರು.ಈ ವರ್ಷದ ಪ್ರವೇಶಾತಿ ಕೊನೆಯಲ್ಲಿ 1000 ವಿದ್ಯಾರ್ಥಿಗಳನ್ನು ಹೊಂದುವ ಅಪೇಕ್ಷೆ ಇದೆ ಪ್ರಸ್ತುತ ಭಾರತದ ಮತ್ತು ಹೊರ ದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಂದ ಪಿ.ಎಚ್.ಡಿ, ಪೆಸ್ಟ್ ಡಾಕ್ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಪರಿಣತಿಯನ್ನು ಪಡೆದಿರುವ 36 ಅಧ್ಯಾಪಕರನ್ನು ನಮ್ಮ ಸಂಸ್ಥೆ ಹೊಂದಿದೆ. ಇವರು ಮಾಹಿತಿ ತಂತ್ರಜ್ಞಾನದ ಕೆಲವು ಆಯಾಮಗಳಲ್ಲಿ ಪ್ರತಿಷ್ಠಿತ ಸಂಸ್ಥೆಗಳೊಂ ದಿಗೆ ಸಹಯೋಗದಲ್ಲಿ ಸಂಶೋಧನೆಯನ್ನು ಕೈಗೊಳ್ಳುತ್ತಿದ್ದಾರೆ. ಸಂಸ್ಥೆಯಲ್ಲಿ 29 ಭೋಧಕೇತರ ಸಿಬ್ಬಂದಿಗಳಿದ್ದಾರೆ.ನಮ್ಮ ಸಂಸ್ಥೆಯ ನಾಲ್ಕನೇ ಸರದಿಯಲ್ಲಿ ತೇರ್ಗಡೆಗೊಳ್ಳುತ್ತಿರುವವರ ಮಕ್ಕಳ ಕ್ಯುಮಿಲೇಟಿವ್ ಸರಾಸರಿ 7.0 ಇದೆ ಹಾಗೂ ಆಸಕ್ತಿಯಿರುವ ಮಕ್ಕಳಲ್ಲಿ ಶೇ.100 ರಷ್ಟು ಕೆಲಸ ಗಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...