LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಾಲಾ,ಕಾಲೇಜು ಸರ್ಕಾರಿ ಕಚೇರಿ ಗಳಿಗೆ ರಜೆ - ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ.....

ಹುಬ್ಬಳ್ಳಿ ಧಾರವಾಡ -

ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ.ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ.ಮತದಾನ ದಿನದಂದು ಎಲ್ಲ ವರ್ಗದ ನೌಕರ ಮತದಾರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ,ರಾಜ್ಯ ಚುನಾವಣಾ ಆಯೋಗವು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು,ಮಹಾನಗರ ವ್ಯಾಪ್ತಿಯ ಎಲ್ಲಾ ಸರಕಾರಿ ಅರೆ ಸರಕಾರಿ ಇಲಾಖೆ,ಖಾಸಗಿ ಉದ್ಯೋ ಗದಾತರು ಈ ಕುರಿತು ಕ್ರಮವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ಚುನಾವಣಾ ವೇಳಾಪಟ್ಟಿ ಯಂತೆ ಸೆಪ್ಟಂಬರ್ 3 ರಂದು ಶುಕ್ರವಾರ ಮತದಾನ ನಡೆಸಲಿದ್ದು, ಚುನಾವಣೆ ನಡೆಯುವ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆ ಗಳು,ವ್ಯವಹಾರಿಕ ಸಂಸ್ಥೆಗಳು,ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗು ವಂತೆ ವೇತನ ಸಹಿತ ರಜೆ ನೀಡಬೇಕು.

ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶ ಗಳ ವ್ಯಾಪ್ತಿಯಲ್ಲಿ ಮತದಾರರಿಗೆ ಮತ ನೀಡಲು ಅನುಕೂಲವಾಗಲು ಆಯಾ ವಾರ್ಡಿನ ವ್ಯಾಪ್ತಿಯ ಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು,ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆ ಗಳಿಗೆ ರಜೆ ಘೋಷಿಸಲಾಗಿದೆ.

ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು,ಆದರೆ ಚುನಾವಣೆ ನಡೆಯುತ್ತಿರುವ ವಾರ್ಡಿನ ವ್ಯಾಪ್ತಿ ಯಲ್ಲಿ ನೊಂದಾಯಿತ ಮತದಾರರ ಆಗಿರುವವರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ ತುರ್ತು ಸೇವೆ ಅಡಿ ಕೆಲಸ ಮಾಡುವ ನೌಕರರಿಗೆ ಮತಚಲಾ ಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡ ಲಾಗುತ್ತದೆ.ಮತ್ತು ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು.ಈ ಆದೇಶವು ಸೆಕ್ಷನ್ 25,ನೆಗೋಷಿಯೆಬಲ್ ಇನ್ಸ್ಟ್ರ ಮೆಂಟ್ ಆಕ್ಟ್ 1881 ರಡಿ ಬರುವ ಎಲ್ಲಾ ಸಂಸ್ಥೆಗ ಳಿಗೂ ಸಹ ಅನ್ವಯಿಸುತ್ತದೆ.

ಸಂಬಂದಿಸಿದ ಎಲ್ಲ ಸಾರ್ವಜನಿಕ ಉದ್ದಿಮೆಗಳು, ಖಾಸಗಿ ಕಂಪನಿ, ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳವರು ಈ ಅಧಿಸೂಚನೆ ಯನ್ನು ಪಾಲಿಸಿ, ಎಲ್ಲ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸೆ. 3 ರಂದು ವೇತನ ಸಹಿತ ರಜೆ ನೀಡಬೇಕೆಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....