LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಉಪನೋಂದಣಾಧಿಕಾರಿಗಳ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ಕಾರ್ಯನಿರ್ವಹಣೆ ಪರಿಶೀಲನೆ.....

ಧಾರವಾಡ -

ಧಾರವಾಡದ ವಿಧಾನಸೌಧದಲ್ಲಿರುವ ಉಪನೋಂದಣಾಧಿ ಕಾರಿಗಳ ಕಚೇರಿಗೆ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ. ಪಾಟೀಲ ಆಕಸ್ಮಿಕವಾಗಿ ಭೇಟಿ ನೀಡಿ ಕಚೇರಿಯ ಕಾರ್ಯ ನಿರ್ವಹಣೆ ಪರಿಶೀಲಿಸಿ,ಸಾರ್ವಜನಿಕ ಸ್ನೇಹಿಯಾದ ವಾತಾವರಣ ನಿರ್ಮಿಸಲು ಸೂಚಿಸಿದರು. ಮಿನಿವಿಧಾನ ಸೌಧದ ನೆಲಮಹಡಿಯಲ್ಲಿ ನೋಂದಣಾಧಿಕಾರಿಗಳ ಕಚೇರಿಗೆ ಆಗಮಿಸಿ,ನೋಂದಣಿ ಸರದಿಯ ಟೋಕನ್ ಪಡೆದಿರುವ ಸಾರ್ವಜನಿಕರಿಗಾಗಿ ಕಲ್ಪಿಸಿರುವ ಆಸನ ವ್ಯವಸ್ಥೆಗಳನ್ನು ವೀಕ್ಷಿಸಿ,ಸ್ಥಳದಲ್ಲಿದ್ದ ಜನರೊಂದಿಗೆ ಮಾತ ನಾಡಿದರು

ಅವರು ಬಂದಿರುವ ಕಾರ್ಯದ ಕಾರಣ ಕಚೇರಿಯಿಂದ ಅವರಿಗೆ ದೊರೆತಿರುವ ಸ್ಪಂದನೆಯ ಕುರಿತು ಮಾಹಿತಿ ಪಡೆದರು.ಮೊದಲ ಮಹಡಿಯಲ್ಲಿರುವ ಕಚೇರಿಗೆ ಪ್ರವೇಶಿಸಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಅವರ ಕಾರ್ಯವಿಧಾನಗಳ ವಿವರ ಪಡೆದರು.ನೋಂದಣಿಗೆ ಆಗಮಿಸುವ ಸಾರ್ವಜನಿಕರು, ಜನಸಾಮಾನ್ಯರಿಗೆ ಸುಲಭವಾಗಿ,ಸರಳವಾಗಿ ಮಾರ್ಗ ದರ್ಶನ ನೀಡುವ ಏರ್ಪಾಡುಗಳನ್ನು ಮಾಡಬೇಕು. ನೋಂದಣಿಗೆ ಅಗತ್ಯವಿರುವ ದಾಖಲೆಗಳ ಮಾಹಿತಿಯ ಫಲಕಗಳನ್ನು ಅಲ್ಲಲ್ಲಿ ಅಳವಡಿಸಬೇಕು. ಸಾರ್ವಜನಿಕ ರಿಂದ ದಾಖಲೆಗಳನ್ನು ಸ್ವೀಕರಿಸಿ,ಪರಿಶೀಲಿಸುವ ಕೌಂಟ ರನ್ನು ಕಚೇರಿಯ ಕಿಟಕಿ ಬಳಿಯೇ ತೆರೆಯಬೇಕೆಂದು ಸೂಚಿಸಿದರು

ಸರದಿ ಅನುಸಾರ ಬರಲು ಅಲ್ಲಿಯೂ ಕ್ರಮವಾಗಿ ಟೋಕನ್‌ ಗಳನ್ನು ನೀಡಬೇಕು.ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಿ ಸುತ್ತಿರುವ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ಒದಗಿಸಲು ಸೂಚಿಸಿದರು.ಎಲ್ಲಾ ದಾಖಲೆಗಳನ್ನು ಸಲ್ಲಿಸಿ ಮಾರ್ಟ್‌ ಗೇಜ್ ನೋಂದಣಿ ಕಾರ್ಯಕ್ಕೆ ಆಗಮಿಸಿದ್ದ ಬಸವರಾಜ ಕುಂದಗೋಳ ಎಂಬುವರ ದಾಖಲೆಗಳನ್ನು ತಮ್ಮ ಸಮ್ಮುಖ ದಲ್ಲಿಯೇ ಪರಿಶೀಲಿಸಲು ಸೂಚಿಸಿದ ಜಿಲ್ಲಾಧಿಕಾರಿಗಳು ಸ್ವತಃ ನೋಂದಣಿ ಟೋಕನ್ ವಿತರಿಸಿದ್ದು ವಿಶೇಷವಾಗಿತ್ತು. ನಿಯಮಿತವಾಗಿ ವಿವಿಧ ಇಲಾಖೆಗಳ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್,ಜಿಲ್ಲಾ ನೋಂದಣಾಧಿಕಾರಿ ಕೆ.ಅಶೋಕ,ತಹಸೀಲ್ದಾರ ಡಾ.ಸಂತೋಷಕುಮಾರ ಬಿರಾದಾರ ಉಪನೋಂದಣಾ ಧಿಕಾರಿ ಜಿ.ಐ.ಅರಮನಿ ಸೇರಿದಂತೆ ಹಲವರು ಉಪಸ್ಥಿತರಿ ದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...