LIVE TV LocalCrimeNationalInternationalPoliticsEducationTechnologyEntertainmentSportsFeature
State News

ಡಿಜೆ ಹಳ್ಳಿ ಗಲಭೆ ಪ್ರಕರಣ -ಸಂಪತ್ ರಾಜ್ ಅಂದರ್

ಬೆಂಗಳೂರು-

ಬೆಂಗಳೂರಿನ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.ಆಗಸ್ಟ್ 11 ರಂದು ರಾತ್ರಿ ಬೆಂಗಳೂರಿನ ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ನನ್ನು ನಿನ್ನೇ ಬೆಂಗಳೂರಿನ ಸಿಸಿಪಿ ಪೊಲೀಸರು ಬಂಧಿಸಿದ್ದಾರೆ.

ಸಂಪತ್ ರಾಜ್

ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಡೆಗೂ ಸಿಸಿಬಿ ಪೊಲೀಸರು ಬಂಧಿಸಿ ವಶಕ್ಕೇತಗೆದುಕೊಂಡಿದ್ದಾರೆ.ಗಲಾಟೆ ಗಲಭೆ ಪ್ರಕರಣ ಕುರಿತಂತೆ ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿತ್ತು. ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಖಾಕಿ ಟೀಮ್ ಹುಡುಕಾಟ ನಡೆಸುತ್ತಿದ್ದರು.

ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ನಡೆದ ಚಿತ್ರ

ಮಂಗಳವಾರವಷ್ಟೇ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಬಲೆಗೆ ಕೊನೆಗೂ ಸಂಪತ್ ರಾಜ್ ಬಿದ್ದಿದ್ದಾನೆ.ಸಧ್ಯ ಸಿಸಿಬಿ ಪೊಲೀಸರು ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 11ರಂದು ರಾತ್ರಿ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಅಲ್ಲದೆ ಪೋಲಿಸ್ ಠಾಣೆಗೂ ಬೆಂಕಿ ಇಟ್ಟಿದ್ದರು. ಈ ಪ್ರಕರಣದ ಬೆನ್ನುಬಿದ್ದ ಪೋಲಿಸರು ಗಲಭೆಯ ಸುಮಾರು 400ಕ್ಕೂ ಅಧಿಕ ಜನರನ್ನು ಈಗಾಗಲೇ ಬಂಧಿಸಲಾಗಿತ್ತು. ನವೀನ್ ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ. ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದಿತ್ತು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ ಕೂಡಾ ನಷ್ಟ ವಾಗಿತ್ತು ಈ ಪ್ರಕರಣದಲ್ಲಿ ತನಿಖೆ ಮಾಡ್ತಾ ಇದ್ದ ಪೊಲೀಸರಿಗೆ ಮಾಜಿ ಮೇಯರ್ ಹೆಸರು ಕೇಳಿಬಂದಿತ್ತು ಅಂದಿನಿಂದ ಸಂಪತ್ ರಾಜ್ ನಾಪತ್ತೆಯಾಗಿದ್ದನು ಸಧ್ಯ ಪೊಲೀಸರು ಸಂಪತ್ ರಾಜ್ ನನ್ನು ಬಂಧಿಸಿದ್ದು ವಶಕ್ಕೇ ತಗೆದುಕೊಂಡು ಡ್ರೀಲ್ ಮಾಡುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....