LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅವಳಿ ನಗರದ ಕೆರೆಗಳ ಸಂರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ - ಪಾಲಿಕೆಯ ಆಯುಕ್ತ ಡಾ ರುದ್ರೇಶ ಘಾಳಿ,ವಿಜಯಕುಮಾರ್ ನೇತ್ರತ್ವದಲ್ಲಿ ಆರಂಭಗೊಂಡಿತು ಪ್ರಾಯೋಗಿಕ ಪರೀಕ್ಷೆ.....

ಹುಬ್ಬಳ್ಳಿ ಧಾರವಾಡ -
ಅವಳಿ ನಗರದ ಕೆರೆಗಳ ಸಂರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ - ಪಾಲಿಕೆಯ ಆಯುಕ್ತ ಡಾ ರುದ್ರೇಶ ಘಾಳಿ,ವಿಜಯಕುಮಾರ್ ನೇತ್ರತ್ವದಲ್ಲಿ ಆರಂಭ ಗೊಂಡಿತು ಪ್ರಾಯೋಗಿಕ ಪರೀಕ್ಷೆ.....ಕಳೆ ಮುಕ್ತವಾಗಲಿವೆ ಹುಬ್ಬಳ್ಳಿ ಧಾರವಾಡದ 40 ಕೆರೆಗಳು ಹೌದು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿನ ಕೆರೆಗಳ ಸಂರಕ್ಷಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆಯನ್ನು ಇಟ್ಟಿದೆ ಪಾಲಿಕೆಯ ಆಯುಕ್ತ ಡಾ ರುದ್ರೇಶ ಘಾಳಿಯವರ , ಉಪ ಆಯುಕ್ತ ವಿಜಯಕುಮಾರ್ ಯವರು ಈ ಒಂದು ಮಹಾನ್ ಕಾರ್ಯಕ್ಕೆ ಮುಂದಾಗಿದ್ದಾರೆ.
ಇತ್ತೀಚಿಗೆ ಅವಳಿ ನಗರದಲ್ಲಿನ ಕೆರೆಗಳು ಕಳೆಯಿಂದ ತುಂಬಿ ಕೊಳ್ಳುತ್ತಾ ಹಾಳಾಗುತ್ತಿದ್ದು ಹೀಗಾಗಿ ಇದನ್ನು ಅರಿತ ಡಾ ರುದ್ರೇಶ ಘಾಳಿಯವರು ವಿಜಯಕುಮಾರ್ ಅವರೊಂದಿಗೆ ಒಳ್ಳೇಯ ತೀರ್ಮಾನವನ್ನು ಕೈಗೊಂಡು ಹುಬ್ಬಳ್ಳಿ-ಧಾರವಾಡದ ನೈಸರ್ಗಿಕ ಸೌಂದರ್ಯದ ಕೊಂಡಿಗಳಂತಿರುವ ಕೆರೆಗಳನ್ನು ಸಂರಕ್ಷಿಸಲು ಮುಂದಾಗಿದ್ದಾರೆ.ಕೆರೆಗಳನ್ನು ಸದಾ ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಧಾರವಾಡದ ಐತಿಹಾಸಿಕ ಕೆಲಗೇರಿ ಕೆರೆಯಲ್ಲಿನ 'ಜಲ ಕಳೆ ತೆಗೆಯುವ ಯಂತ್ರ'ದ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು.ಅನಗತ್ಯ ಜಲ ಸಸ್ಯಗಳನ್ನು ಅತ್ಯಂತ ವೇಗವಾಗಿ ತೆರವುಗೊಳಿಸುವ ಸಾಮರ್ಥ್ಯವನ್ನು ಈ ಯಂತ್ರ ಹೊಂದಿದ್ದು, ಅವಳಿನಗರದ ಒಟ್ಟು 40 ಕೆರೆಗಳನ್ನು ಕಳೆಮುಕ್ತಗೊಳಿಸಿ ನಿರ್ಮಲವಾಗಿರಿಸಲು ಪಾಲಿಕೆಯು ಈ ಯಂತ್ರವನ್ನು ಖರೀದಿಸಲು ನಿರ್ಧರಿಸಿದೆ.
ಈ ಮಹತ್ವದ ಪ್ರಾಯೋಗಿಕ ಪರೀಕ್ಷೆ ಆರಂಭಗೊಂಡಿದೆ. ಇದೆ ವೇಳೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಘಾಳಿ ಹಾಗೂ ಉಪ ಆಯುಕ್ತ ರಾದ (ಅಭಿವೃದ್ಧಿ) ವಿಜಯ್ ಕುಮಾರ್ ಆರ್ ಎಕ್ಸಿಕ್ಯುಟಿವ್ ಎಂಜಿನಿಯರ್ ರಿಯಾಜ್ ಹಾಗೂ ಕಿರಿಯ ಎಂಜಿನಿಯರ್ ಶ್ರೀಮತಿ ಉಷಾ ಸೇರಿದಂತೆ ಹಲವರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪಾಲಿಕೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಾ ಚರಣೆಯು ಮುಂಬರುವ ದಿನಗಳಲ್ಲಿ ನಗರದ ಎಲ್ಲಾ ಕೆರೆಗಳಿಗೆ ಕಾಯಕಲ್ಪ ನೀಡುವ ಭರವಸೆ ಮೂಡಿಸಿದೆ. ಪರಿಸರ ಸ್ನೇಹಿ ತಂತ್ರಜ್ಞಾನದ ಬಳಕೆಯಿಂದ ಕೆರೆಗಳ ಆವರಣವು ಸಾರ್ವಜ ನಿಕರಿಗೆ ಆಕರ್ಷಕ ಪ್ರವಾಸಿ ತಾಣವಾಗಿ ಮಾರ್ಪಾಡಾಗಲಿವೆ
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....