LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಸಚಿವರ ದಿಢೀರ್ ಭೇಟಿ.....ಶಾಲೆಯಲ್ಲಿ ಸಚಿವರು.....

ಶಿವಮೊಗ್ಗ -

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರಿ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ ಶಾಲಾ ಮಕ್ಕಳ ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ ಮಾಡಿ ಮಾಹಿತಿ ಪಡೆದುಕೊಂಡರು ಹೌದು ಈಸೂರಿಗೆ ತೆರಳುವ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಆಯನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾಗೆ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ದಿಢೀರ್ ಭೇಟಿ ನೀಡಿ, ಶಾಲೆಯಲ್ಲಿನ ಶೈಕ್ಷಣಿಕ ಚಟುವಟಿಕೆ ಹಾಗೂ ಶೂ- ಸಾಕ್ಸ್ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು.

ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿದ ಸಚಿವರು, ಸರ್ಕಾರ ನೀಡಿದ ಶೂ ಮತ್ತು ಸಾಕ್ಸ್‌ ಎಲ್ಲರಿಗೂ ದೊರೆತಿದೆಯೇ ಎಂದು ವಿದ್ಯಾರ್ಥಿಗಳನ್ನೇ ಪ್ರಶ್ನಿಸಿದರು ಅಲ್ಲದೆ, ಅವರಿಗೆ ನೀಡಲಾಗಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟ ಪರಿಶೀಲಿಸಿದರು. ʻʻತಮಗೆ ನೀಡಲಾಗಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟ ತೃಪ್ತಿಕರವಾಗಿದೆ. ಪೋಷಕರೂ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆʼʼ ಎಂದು ವಿದ್ಯಾರ್ಥಿಗಳು ಸಚಿವರಿಗೆ ಮಾಹಿತಿ ನೀಡಿದರು. ಶೂ-ಸಾಕ್ಸ್‌ನ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳಿರುವ ಹಿನ್ನೆಲೆಯಲ್ಲಿ ಸಚಿವರು ಈ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ವಿದ್ಯಾರ್ಥಿನಿಯೋರ್ವಳು ಶೌಚಾಲಯ ವ್ಯವಸ್ಥೆ ಸರಿಪಡಿಸುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದು, ಕೂಡಲೇ ಸಚಿವರು ಶಾಲೆಯ ನೈರ್ಮಲ್ಯ, ಶೌಚಾಲಯ ವ್ಯವಸ್ಥೆ, ಬಿಸಿಯೂಟದ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಶಾಲೆಯ ಮೇಲ್ಚಾವಣಿ ದುರಸ್ತಿ ಕಾರ್ಯ ವೀಕ್ಷಿಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಶಾಲಾ ವಿದ್ಯಾರ್ಥಿಗಳಿಗೆ ಕಳಪೆ ಶೂ ನೀಡಲಾಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಈ ಸಂಬಂಧ ಬೇಜವಾಬ್ದಾರಿ ಸರ್ಕಾರ ಎಂದು ದೂರಿದ್ದರು.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
15 ಜಿಲ್ಲೆಗಳ ಡಿಡಿಪಿಐ, ಬಿಇಒಗಳ ವಿರುದ್ಧ ದೂರು ದಾಖಲು.....ತನಿಖೆ ಶುರು.....ಶನಿವಾರ ಪೂರ್ಣ ತರಗತಿ ನಡೆಸಲು ಆದೇಶ.....ಆದೇಶ ಮಾಡಿದ DDPI.....ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ.....ಎರಡೂವರೆ ಲಕ್ಷ ಲಂಚ ತೆಗೆದುಕೊಳ್ಳುವಾಗ ಲಾಕ್.....ಬಿಇಒ ಕಚೇರಿ ಅಧೀಕ್ಷಕ ವೇಣುಗೋಪಾಲ್ ನಿಧನ.....ನಾಡಿನ‌ ಶಿಕ್ಷಕ ಬಂಧುಗಳ ಕಂಬನಿ.....ಗೋವಾದ ಪಣಜಿಯಲ್ಲಿ 'Big Mishra' ಸಂಜಯ ಮಿಶ್ರಾ ಮಾಲೀಕತ್ವದ ‘ಬಿಗ್ ಮಿಶ್ರಾ’ ಮಳಿಗೆ ಆರಂಭ.....ಗೋವಾದಲ್ಲಿ ಉತ್ತರ ಕರ್ನಾಟಕದ Big Mishra.....ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಸಚಿವರ ದಿಢೀರ್ ಭೇಟಿ.....ಶಾಲೆಯಲ್ಲಿ ಸಚಿವರು.....ಅನಾಥ ಶವವಾಗಿ ಪತ್ತೆಯಾದ ಸರ್ಕಾರಿ ನೌಕರ.....ಸಾಯುವ ಕೊನೆ ಗಳಿಗೆಯಲ್ಲೂ ಸಿಗಲಿಲ್ಲ ಕುಟುಂಬದ ಆಸರೆ.....ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಲಿದೆ ಈ ಎಲ್ಲಾ ಉಚಿತ ಸೌಲಭ್ಯಗಳು.....ಯಾವ ಯಾವ ಸೌಲಭ್ಯಗಳು ಸಿಗಲಿವೆ ನೋಡಿ.....ರಾಜ್ಯದ ಶಿಕ್ಷಕರಿಗೆ ಅಧಿಕಾರಿಗಳಿಗೆ ಮಹತ್ವದ ತರಬೇತಿ ಕಾರ್ಯಾಗಾರ...... ಇಂದೇ ಕಾರ್ಯಾಗಾರ ಲಿಂಕ್ ಬಳಸಿ ತರಬೇತಿ ಹಾಜರಾಗಿ ಇಲಾಖೆಯ ಮಹತ್ವದ ಸಂದೇಶ......ಸದ್ದಿಲ್ಲದೇ ಕರ್ನಾಟಕಕ್ಕೆ ಕಾಲಿಟ್ಟ ಕಾಕ್ರೋಚ್ ಪಾರ್ಟಿ.....ಸರ್ಕಾರಿ ಶಾಲೆಗಳ ವ್ಯವಸ್ಥೆ ಕುರಿತು ಸಚಿವರೊಂದಿಗೆ ಚರ್ಚೆ.....