LIVE TV LocalCrimeNationalInternationalPoliticsEducationTechnologyEntertainmentSportsFeature
State News

ACB ಬಲೆಗೆ BEO ಮತ್ತು SDC - ದಾಳಿಯಾಗುತ್ತಿದ್ದಂತೆ ಎಸ್ಕೇಪ್

ಕೊಪ್ಪಳ -

ಶಾಲೆಯ ಠೇವಣಿ ಹಣ ವಾಪಸ್ ನೀಡಲು ಲಂಚ ಪಡೆಯುತ್ತಿದ್ದ ಕೊಪ್ಪಳ ಬಿಇಓ ಹಾಗೂ ಎಸ್ಡಿಸಿ ಅವರ ಮೇಲೆ ಬಿಇಒ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು‌ ದಾಳಿ ನಡೆಸಿ ಬಂಧಿಸಿದ್ದಾರೆ.ಕೊಪ್ಪಳ ಬಿಇಓ ಉಮಾದೇವಿ ಸೊನ್ನದ್, ಎಸ್ಡಿಎ ಅರುಂದತಿ ಬಲೆಗೆ ಬಿದ್ದವರು.

ಭಾಗ್ಯನಗರ ಎಸ್.ಎಸ್.ಕೆ ಶಾಲೆಯು ಬಂದ್ ಆದ ಕಾರಣ ಠೇವಣಿಯ 10 ಸಾವಿರ ರೂ ವಾಪಸ್ ನೀಡುವಂತೆ ಶಾಲೆ ಮುಖ್ಯಸ್ಥ ಬಾಲು ಕಬಾಡಿ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಮನವಿಗೆ ಸ್ಪಂದಿಸದ ಬಿಇಓ ಅವರು ಸುಮಾರು ದಿನಗಳ ಕಾಲ ಅಲೆದಾಡಿಸಿದ್ದರು. ಕೊನೆಗೆ 10 ಸಾವಿರ ರೂಪಾಯಿಯಲ್ಲಿ 5 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಬಿಇಒ ಬೇಡಿಕೆಯ ಕುರಿತು ದೂರುದಾರ ಬಾಲು ಕಬಾಡಿಯವರು ಎಸಿಬಿಗೆ ದೂರು ನೀಡಿ. 5 ಸಾವಿರ ಹಣವನ್ನು ಬಿಇಒ ಕಚೇರಿಯಲ್ಲಿ ಹಣವನ್ನು

ನೀಡುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದ್ದಾರೆ.ಬಳ್ಳಾರಿ ಎಸ್ಪಿ ಗುರುನಾಥ ಮತ್ತೂರ ಮಾರ್ಗದರ್ಶನದಲ್ಲಿ ಡಿಎಸ್ಪಿ ಶಿವಕುಮಾರ್, ಎಸ್ ಎಸ್ ಬೀಳಗಿ, ಎಸೈ ಬಾಳನಗೌಡ ತಂಡದಿಂದ ದಾಳಿ ನಡೆಸಿದ್ದಾರೆ. ಎಸ್ಡಿಎ ಅರುಂಧತಿ ಅವರನ್ನು ಬಂಧಿಸಿದ್ದು, ಬಿಇಓ ಶ್ರೀಮತಿ ಉಮಾದೇವಿ ಸೊನ್ನದ ತಲೆ ಮರಿಸಿಕೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....