LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ

ಉಡುಪಿ -

3 ವರ್ಷಗಳಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿಗೆ ಕ್ರಮ,ಡಾರ್ಕ್ ವೆಬ್ ಡ್ರಗ್ ಜಾಲ ಬೇಧಿಸಿದ ಕೀರ್ತಿ ನಮ್ಮದು - ಗೃಹ ಸಚಿವ ಬಸವರಾಜ ಬೊಮ್ಮಾಯಿ

ಮುಂದಿನ ೩ ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶನಿವಾರ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಲಿದೆ. ಈಗಿರುವ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕ ವಾಗಿದೆ. ಮಾನವ ಮಧ್ಯಸ್ಥಿಕೆ ಇಲ್ಲದ ರೀತಿ ನೇಮಕಾತಿ ಪ್ರಕ್ರಿಯೆ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

ದೇಶದಲ್ಲೇ ಮೊದಲು

ಡಾರ್ಕ್ ವೆಬ್ ಮೂಲಕ ಜನರನ್ನು ಸಂಪರ್ಕಿಸಿ ಡ್ರಗ್ ಪೂರೈಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವನ್ನು ದೇಶದಲ್ಲಿ ಮೊಟ್ಟ ಮೊದಲು ಮಟ್ಟ ಹಾಕಿದ್ದು ಕರ್ನಾಟಕ ಪೊಲೀಸ್. ಇದು ನಿಜಕ್ಕೂ ಹೆಮ್ಮೆಯ ವಿಷಯ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿರುವ ನಾಲ್ಕು ವಿಭಾಗಗಳಲ್ಲಿ ಒಂದೊಂದು ಅತ್ಯಂತ ಸುಸಜ್ಜಿತ FSL ತನಿಖಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಾಜ್ಯದಲ್ಲಿ ಹೆಚ್ವುತ್ತಿರುವ ಸೈಬರ್ ಕ್ರೈಮ್ ನ್ನು ಮಟ್ಟ ಹಾಕಲಾಗುವುದು. ಬೆಳಗಾವಿ, ಮೈಸೂರು, ಮಂಗಳೂರು, ಕಲಬುರಗಿ ವಿಭಾಗಗಳಲ್ಲಿ ತಲಾ ಒಂದು ಎಫ್ ಎಸ್ ಎಲ್ ಲ್ಯಾಬ್ ಆರಂಭಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.ಪೊಲೀಸ್ ಆಡಳಿತದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮಾರ್ಚ್ 31ಹತ್ತು ವರ್ಷಗಳ‌ ಹಿಂದೆ ಸೈಬರ್ ಅಪರಾಧಗಳು ಇರಲಿಲ್ಲ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಸೈಬರ್ ಅಪರಾಧ ಗಳು ಹೆಚ್ವುತ್ತಿವೆ. ಪೊಲೀಸ್ ಇಲಾಖೆಗೆ ಇದು ಹೊಸ ಸವಾಲು ಒಡ್ಡಿದೆ. ಈ ಅಪರಾಧ ಮಟ್ಟ ಹಾಕಲು ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ರೊಳಗಾಗಿ ಅವರು ವರದಿ ಸಲ್ಲಿಸಲಿದ್ದಾರೆ. ಪೊಲೀಸ್ ವ್ಯವಸ್ಥೆ ಸುಧಾರಿಸಲು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇನ್ನೂ ಹೆಬ್ರಿಯಲ್ಲಿ ಎರಡು ಪೊಲೀಸ್ ಠಾಣೆಗಳ ಅಗತ್ಯ ಇದೆ ಎಂದು ಶಾಸಕ ಸುನಿಲ್ ಕುಮಾರ್ ಬೇಡಿಕೆ ಇಟ್ಟಿದ್ದಾರೆ. ಹೆಬ್ರಿಗೆ (ಕಾ ಮತ್ತು ಸು) ಪೊಲಿಸ್ ಠಾಣೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಅಗ್ನಿ ಶಾಮಕ ಠಾಣೆ ಸ್ಥಾಪನೆ ಅಸಾಧ್ಯವಾಗದಿದ್ದರೆ ಅಗ್ನಿ ಶಾಮಕ ಉಪ ಠಾಣೆ ಜತೆ ಫೈರ್ ಇಂಜಿನ್ ವಾಹನ ನೀಡಲಾಗುವುದು. ಈ ವಿಷಯಗಳನ್ನು ಬಜೆಟ್ ನಲ್ಲಿ ಘೋಷಿಸಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ಗಳು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....