LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವೃತ್ತಿಪರ ತರಬೇತಿ ಕೇಂದ್ರ ಸ್ಥಾಪನೆ

ಕೋಲಾರ -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವೃತ್ತಿಪರ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ರಾಜ್ಯ ಸರ್ವ ಶಿಕ್ಷಣ ಅಭಿಯಾನದ ಜಂಟಿ ನಿರ್ದೇಶಕ ಕೆ.ರತ್ನಯ್ಯ ತಿಳಿಸಿದರು.ಕೋಲಾರದಲ್ಲಿ ಮಾತನಾ ಡಿದ ಅವರು ರಾಷ್ಟ್ರೀಯ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳಾಗಿಸುವ ದೃಷ್ಟಿಯಿಂದ 100 ಶಾಲೆಗಳಲ್ಲಿ ವೃತ್ತಿಪರ ತರಬೇತಿ ಕೇಂದ್ರ ಸ್ಥಾಪಿಸುವ ಉದ್ದೇಶವಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಯೋಜನೆಗಳ ಕುರಿತು ಇಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಮಗುವಿನ ಕಲಿಕಾ ಪ್ರಗತಿ ಆಧಾರದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿ- 2020ರಡಿ ಕಾರ್ಯೋನ್ಮುಖವಾಗುವ ಅಗತ್ಯವಿದೆ. ಕೌಶಲಾಭಿವೃದ್ಧಿ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯನ್ನುಪಟ್ಟರು.

ಶಾಲೆಗಳ ಭೌತಿಕ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ.ಈ ಹಿನ್ನೆಲೆಯಲ್ಲಿ ಶಾಲೆಗಳು ಸುಂದರ ಗೊಳ್ಳಬೇಕು.ಸ್ವಚ್ಛತೆಗೆ ಒತ್ತು ನೀಡಿ ಮತ್ತು ಶೌಚಾ ಲಯ,ಕುಡಿಯುವ ನೀರು ಸೇರಿದಂತೆ ಸೌಲಭ್ಯಗಳು ಸಮರ್ಪಕವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನೂ ಪ್ರಮುಖವಾಗಿ ಶಾಲೆಗಳಲ್ಲಿ ಅಗತ್ಯವಿರುವ ಕಾಮಗಾರಿಗಳ ಕುರಿತು ಮಾಹಿತಿ ನೀಡಿ.ಶಿಕ್ಷಕರಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ಪಾವತಿಯಾಗಬೇಕು.ಇಲಾಖೆಯ ಕಡತಗಳನ್ನು ನಿಯಮಾನುಸಾರ ವಿಷಯ ನಿರ್ವಾಹಕರು ಮಂಡಿಸಿ ನಿರ್ವಹಣೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್, ಸಿ.ಆರ್.ಅಶೋಕ್,ಡಿವೈಪಿಸಿ ಗಂಗರಾಮಯ್ಯ, ಎವೈಪಿಒಗಳಾದ ಮೋಹನ್‌ಬಾಬು,ಸಿದ್ದೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಬಿ.ರಾಮಕೃಷ್ಣಪ್ಪ, ಉಮಾದೇವಿ,ಕೃಷ್ಣಮೂರ್ತಿ,ಕೆಂಪಯ್ಯ, ಚಂದ್ರಶೇಖರ್ ಬಾಲಾಜಿ ಹಾಜರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......