LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇಬ್ಬರೂ ಶಾಸಕರು ಉಚ್ಚಾಟನೆ ಇಬ್ಬರೂ ಶಾಸಕ ರಿಗೆ ಬಿಸಿ ಮುಟ್ಟಿಸಿದ ಸಮಿತಿ ಸಭೆ.....

ಬೆಂಗಳೂರು -

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್‌ 10ರಂದು ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಶಾಸಕರಾದ ಎಸ್‌.ಆರ್‌. ಶ್ರೀನಿವಾಸ್‌ (ಗುಬ್ಬಿ) ಮತ್ತು ಕೆ. ಶ್ರೀನಿವಾಸ ಗೌಡ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಲಾ ಗಿದೆ.ಇಬ್ಬರೂ ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್‌ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.ಈ ನಿರ್ಣಯಕ್ಕೆ ಪೂರಕವಾಗಿ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸಬೇಕೆಂಬ ವಿಪ್‌ ಅನ್ನು ಇಬ್ಬರೂ ಉಲ್ಲಂಘಿಸಿದ್ದಾರೆ.ಗುಬ್ಬಿ ಶ್ರೀನಿವಾಸ್‌ ಅವರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಲಹರ್‌ ಸಿಂಗ್‌ ಅವರಿಗೆ ಮತ್ತು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ ನೀಡಿದ್ದರು.ಕೆ.ಶ್ರೀನಿವಾಸ ಗೌಡ ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ಗೆ ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆ‍ಪಿಯ ಲಹರ್‌ ಸಿಂಗ್‌ ಅವರಿಗೆ ನೀಡಿದ್ದರು ಎಂಬುದಾಗಿ ಜೆಡಿಎಸ್‌ ಮತಗಟ್ಟೆ ಏಜೆಂಟ್‌ ಎಚ್‌.ಡಿ. ರೇವಣ್ಣ ವರದಿ ನೀಡಿದ್ದಾರೆ ಎಂಬ ಉಲ್ಲೇಖ ಉಚ್ಛಾಟನೆ ಆದೇಶದಲ್ಲಿದೆ.ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಇಬ್ಬರೂ ಶಾಸಕರನ್ನು ಅನರ್ಹಗೊಳಿಸುವಂತೆ ವಿಧಾನಸಭೆಯ ಅಧ್ಯಕ್ಷರಿಗೆ ದೂರು ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ಎರಡು ದಿನಗಳೊಳಗೆ ದೂರು ಸಲ್ಲಿಸುತ್ತೇವೆ' ಎಂದು ಬಂಡೆಪ್ಪ ಕಾಶೆಂಪುರ ಸುದ್ದಿಗಾರರಿಗೆ ತಿಳಿಸಿದರು.ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಇಬ್ಬರೂ ಶಾಸಕರನ್ನು ಅನರ್ಹಗೊಳಿಸುವಂತೆ ವಿಧಾನ ಸಭೆಯ ಅಧ್ಯಕ್ಷರಿಗೆ ದೂರು ನೀಡಲು ನಿರ್ಣಯ ಕೈಗೊಳ್ಳ ಲಾಗಿದೆ. ಎರಡು ದಿನಗಳೊಳಗೆ ದೂರು ಸಲ್ಲಿಸುತ್ತೇವೆ' ಎಂದು ಬಂಡೆಪ್ಪ ಕಾಶೆಂಪುರ ಸುದ್ದಿಗಾರರಿಗೆ ತಿಳಿಸಿದರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ಶಾಸಕ ಎಚ್‌.ಡಿ. ರೇವಣ್ಣ ಸೇರಿದಂತೆ ಹಲವು ನಾಯಕರು ಪ್ರಮುಖರ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......