LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಫೇಸ್ ಬುಕ್ ಹ್ಯಾಕ್ – ಇಂಜನಿಯರ್ ಹೆಸರಿನಲ್ಲಿ ಹಣ ಬೇಡಿಕೆ

ಧಾರವಾಡ -

ಕಳೆದ ಒಂದು ತಿಂಗಳಿನಿಂದ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಠಿಸಿ ಹಣ ಕೇಳೊದನ್ನು ನೋಡಿದ್ದೇವೆ ಕೇಳಿದ್ದೇವೆ. ಒಂದಿಲ್ಲೊಂದು ಖಾತೆಗಳು ನಕಲಿ ಆಗುತ್ತಾ ಹಣ ಕೇಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪೊಲೀಸ್ ಅಧಿಕಾರಿಗಳ ನಂತರ ಈಗ ಬೇರೆಯವರ ಹೆಸರಿನಲ್ಲೂ ಫೇಸ್ ಬುಕ್ ನಲ್ಲಿ ಹಣ ಕೇಳುತ್ತಿರುವುದು ಬೆಳಕಿಗೆ ಬಂದಿದೆ.

ಸುನೀಲ್ ಬಾಗೇವಾಡಿ

ಹೌದು ಧಾರವಾಡದಲ್ಲಿ ಇಂಜನಿಯರ್ ಸುನೀಲ ಬಾಗೇವಾಡಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ ಸಂದೇಶಗಳ ಮೂಲಕ ನಮಗೆ ಸಹಾಯ ಮಾಡಿ ಎನ್ನುತ್ತಾ ಹಣವನ್ನು ಕೇಳುತ್ತಿದ್ದಾರೆ.

ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಠಿಸಿ ನಂತರ ಅದರಿಂದ ಅವರಿಗೆ ಪರಿಚಯವಿರುವ ಎಲ್ಲರಿಗೂ ಸಂದೇಶಗಳನ್ನು ಕಳಿಸಿ ದಯಮಾಡಿ ನಾನು ಕಷ್ಟದಲ್ಲಿದ್ದೇನೆ ಸಹಾಯ ಮಾಡಿ ಎನ್ನುತ್ತಾ ಹಣ ಹಾಕಿ ಎನ್ನುತ್ತಾ ಗೂಗಲ್ ಪೇ ನಂಬರ್ ನ್ನು ನೀಡಿದ್ದಾರೆ.

ಇನ್ನೂ ಈ ಒಂದು ವಿಚಾರ ಗಮನಕ್ಕೇ ಬರುತ್ತಿದ್ದಂತೆ ಇಂಜನಿಯರ್ ಸುನೀಲ ಬಾಗೇವಾಡಿ ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಠಿಸಿ ಹಣ ಕೇಳುತ್ತಿರುವುದು ಗಮನಕ್ಕೇ ಬಂದಿದೆ ದಯಮಾಡಿ ಯಾರು ಹಣ ಹಾಕಬೇಡಿ ಎಂದಿದ್ದಾರೆ ಅಲದೇ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನೂ ಇದನ್ನು ಗಂಭೀರವಾಗಿ ತಗೆದುಕೊಂಡು ಹೀಗೆ ಹಣವನ್ನು ಕೇಳುತ್ತಿರುವವರ ಮೇಲೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......