LIVE TV LocalCrimeNationalInternationalPoliticsEducationTechnologyEntertainmentSportsFeature
State News

FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ - ಪೊಲೀಸ್ ಕಾನ್ಸ್‌ಟೇಬಲ್ ಸೇರಿ ಮೂವರ ಬಂಧನ

ಬೆಂಗಳೂರು -

ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದೆ. ಈಗಾಗಲೇ ಈ ಒಂದು ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಪ್ರಮುಖ ಆರೋಪಿ ಸೇರಿದಂತೆ ಹಲವರನ್ನು ಬಂಧಿಸಿದ ಬೆನ್ನಲ್ಲೇ ಈಗ ಮತ್ತೆ ಮೂವರನ್ನು ಬಂಧನ ಮಾಡಲಾಗಿದೆ.

ಸಿ ಎ ಆರ್ ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದಲ್ಲಿ ಮತ್ತೆ ಮೂವರನ್ನು ಬಂಧನ ಮಾಡಲಾಗಿದೆ. ಕೆಪಿಎಸ್ ಸಿ ನಡೆಸುವ ಎಫ್ ಡಿಎ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಮುಸ್ತಾಕ್ ‌ನನ್ನು ಬಂಧನ ಮಾಡಲಾಗಿದೆ.

ಪೊಲೀಸ್ ಮುಸ್ತಾಕ್

ಸಿಸಿಬಿ ಪೊಲೀಸರ ತನಿಖೆ ವೇಳೆ ಕೆಪಿಎಸ್ ಸಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಸ್ಟನೋಗ್ರಾಫರ್ ಸನಾ ಬೇಡಿ ಜೊತೆ ಲಿಂಕ್ ಹಿನ್ನಲೆಯಲ್ಲಿ ಕಾನ್ಸ್‌ಟೇಬಲ್ ಮುಸ್ತಾಕ್ ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸನಾ ಬೇಡಿ

ಎಫ್ ಡಿಎ ಪರೀಕ್ಷೆ ಕೂಡ ಬರೆಯಲು ತಯಾರಿ ನಡೆಸಿದ್ದ ಪಿಸಿ ಮುಸ್ತಾಕ್ ಪರೀಕ್ಷೆ ಬರೆಯಲು ಕವಿತಾ ನಾಯ್ಕ್ ಅವರೊಂದಿಗೆ ಹಾವೇರಿಗೆ ತೆರಳಿದ್ದ.

ಹಾವೇರಿಯಲ್ಲಿ ಭಾನುವಾರ ಪರೀಕ್ಷೆ ಬರೆಯಲು ತೆರಳಿದ್ದ.ಆದರೆ ಪೇಪರ್ ಲೀಕ್ ಆಗಿತ್ತು‌ ಬಳಿಕ ಪೋನ್ ಆಪ್ ಮಾಡಿಕೊಂಡು ಹಾವೇರಿಯಲ್ಲೇ ಉಳಿದುಕೊಂಡಿದ್ದ. ಆರೋಪಿತೆ ಸನಾ ಬೇಡಿ ವಿಚಾರಣೆ ಮಾಡಿದಾಗ ಪ್ರಶ್ನೆ ಪತ್ರಿಕೆಯನ್ನು ಸಿಎಆರ್ ಕಾನ್ಸ್ ಟೇಬಲ್ ಮುಸ್ತಾಕ್ ಗೆ ನೀಡಿದಾಗಿ ಹೇಳಿಕೆ ನೀಡಿದ್ದರು.

ತನಿಖೆ ಮುಂದುವರೆಸಿರುವ ಸಿಸಿಬಿ ಪೊಲೀಸರು ಹಾವೇರಿಯಲ್ಲಿ ಮುಸ್ತಾಕ್ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ರು.ವಿಚಾರಣೆ ವೇಳೆ ಪ್ರಶ್ನೆ ಪತ್ರಿಕೆ ಪಡೆದಿದ್ದಾಗಿ ತಪ್ಪೋಪ್ಪಿಕೊಂಡಿದ್ದ. ಹೀಗಾಗಿ ಸಿಎಆರ್ ಕಾನ್ಸ್ ಟೇಬಲ್ ಮುಸ್ತಾಕ್ ಬಂಧಿಸಲಾಗಿದೆ ಎಂದು ಸಿಸಿಬಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಚಂದ್ರ ಮತ್ರು ರಾಚಪ್ಪ

ಈಗಾಗಲೇ ಈ ಪ್ರಕರಣದಲ್ಲಿ 82 ಲಕ್ಷ ಹಣ ಹಾಗೂ ಕಿಂಗ್ ಪಿನ್ ವಾಣಿಜ್ಯ ಇಲಾಖೆ ಇನ್ಸ್ ಪೆಕ್ಟರ್ ಚಂದ್ರು,ರಾಚಪ್ಪ ಸೇರಿ 18 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ತಂಡ ಯಶಸ್ವಿಯಾಗಿದೆ.ಇದರ ಜೊತೆಗೆ ಇಂದು ಮತ್ತೊಬ್ಬ ಆರೋಪಿ ಕೆಪಿಎಸ್ ಸಿ ಅಕೌಂಟೆಂಟ್ ಬಸವರಾಜ್ ಕುಬಾರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಸವರಾಜ ಕುಂಬಾರ

ಇನ್ನೂ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಸಿಸಿಬಿ ಪೊಲೀಸರು ಬಿಡುವಿಲ್ಲದೆ ತನಿಖೆಯನ್ನು ಮಾಡತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....