LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಶಿಕ್ಷಕ, ಶಿಕ್ಷಕಿ ಮೇಲೆ FIR ದಾಖಲು.....

ಬಾಗಲಕೋಟೆ -

ವಿದ್ಯಾರ್ಥಿ ಶ್ರೇಯಸ್ ಮೇಲಿನ ಹಲ್ಲೆ ಪ್ರಕರಣ ಕುರಿತಂತೆ ಶಿಕ್ಷಕಿ,ಮುಖ್ಯ ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಹೌದು ಬಾಗಲಕೋಟೆಯಲ್ಲಿ ನಡೆದ ಎರಡನೇ ತರಗತಿ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವಲಗಿ ಗ್ರಾಮದ ರಾಣಿ ಚನ್ನಮ್ಮ ಖಾಸಗಿ ಶಾಲೆಯ ಮುಖ್ಯ ಶಿಕ್ಷಕ ಮಾನೇಶ ಅಂಬಿ ಹಾಗೂ ಶಿಕ್ಷಕಿ ವಿಜಯಲಕ್ಷ್ಮಿ ತಳವಾರ ವಿರುದ್ಧ ಬನಹಟ್ಟಿ ಪೊಲೀಸ್ ಠಾಣೆ ಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಹೋಂವರ್ಕ್ ಮಾಡದ ಕಾರಣಕ್ಕೆ ಎರಡನೇ ತರಗತಿಯ ವಿದ್ಯಾರ್ಥಿ ಶ್ರೇಯಸ್ ಮೇಲೆ ಹಲ್ಲೆ ನಡೆಸಲಾಗಿತ್ತು ಎನ್ನಲಾದ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಬಾಲಕನ ಕೈಕಾಲುಗಳ ಮೇಲೆ ಹಲ್ಲೆಯ ಗುರುತುಗಳು ಕಂಡುಬಂದಿದ್ದವು ಎಂದು ವರದಿಯಾಗಿತ್ತು.news_1795665940_0_258.webp

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿ ಕಾರಿಗಳು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿ ಸಿಕೊಂಡು ತನಿಖೆ ಆರಂಭಿಸಿದ್ದಾರೆ ಆರೋಪಿಗಳ ವಿಚಾರಣೆಗೂ ಪೊಲೀಸರು ಮುಂದಾಗಿದ್ದಾರೆ.

ಈ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಎಂದರೆ ರಾಣಿ ಚನ್ನಮ್ಮ ಶಾಲೆಯ ಅಧ್ಯಕ್ಷ ಪ್ರಕಾಶ್ ಬಳಗಾರ ಅವರ ಹೆಸರು ಎಫ್‌ಐಆರ್‌ನಲ್ಲಿ ಉಲ್ಲೇಖ ವಾಗಿಲ್ಲ ಎಂಬ ವಿಚಾರ. ಶಾಲೆಯ ಮುಖ್ಯಸ್ಥರು ಹಾಗೂ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಾಗಿದ್ದರೂ, ಶಾಲೆಯ ಅಧ್ಯಕ್ಷರ ಹೆಸರನ್ನು ಕೈಬಿಟ್ಟಿರುವುದಕ್ಕೆ ಕಾರಣವೇನು ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಇನ್ನು ಮಕ್ಕಳ ರಕ್ಷಣಾ ಇಲಾಖೆಯು ಸಂಬಂಧಪಟ್ಟ ಶಿಕ್ಷಕರನ್ನು ಅಮಾನತುಗೊಳಿಸುವುದು ಹಾಗೂ ಶಾಲೆಯಲ್ಲಿ ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಡ ಹೇರುತ್ತಿದೆ ಎನ್ನಲಾಗಿದೆ.ಮಕ್ಕಳ ಶಿಕ್ಷಣದ ಜೊತೆಗೆ ಅವರ ಸುರಕ್ಷತೆಯೂ ಶಾಲೆಗಳ ಪ್ರಮುಖ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಶಿಕ್ಷಕ, ಶಿಕ್ಷಕಿ ಮೇಲೆ FIR ದಾಖಲು.....ನಾಡಿನ ಜನತೆಗೆ ಕನಕದಾಸ ಜಯಂತಿಯ ಶುಭಾಶಯ ಕೋರಿದ ಧಾರವಾಡ ಬಿಗ್ ಮಿಶ್ರಾ ಸಂಸ್ಥೆ.....ಏಪ್ರಿಲ್ ಒಳಗೆ ಹೊಸ ಶಿಕ್ಷಕರಿಗೆ ನೇಮಕಾತಿ ಆದೇಶ: ಸಚಿವ ಮಧು ಬಂಗಾರಪ್ಪ..... ಮಾಹಿತಿ ನೀಡಿದ ಶಿಕ್ಷಣ ಸಚಿವರು.....ಶಿಕ್ಷಕರ ವರ್ಗಾವಣೆ ನಿಯಮಗಳಲ್ಲಿ ಮಹತ್ವದ ಬದಲಾವಣೆ.....ಇಲಾಖೆಯಿಂದ ಅಧಿಕೃತ ಮಾಹಿತಿ.....ಚಿರತೆ ಪ್ರತ್ಯಕ್ಷ ಶಾಲಾ ವಿದ್ಯಾರ್ಥಿಗಳಲ್ಲಿ ಆತಂಕ.....ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..... ಮೂರು ದಿನ ಸಾಲು ಸಾಲು ರಜೆ.....ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.....ಅಕ್ಷರ ದಾಸೋಹ ಯೋಜನೆ ಅಧಿಕಾರಿಯನ್ನು ಲೋಕಾ ಬಲೆಗೆ ಹಾಕಿದ ಶಿಕ್ಷಕ.....ಲೋಕಾಯುಕ್ತ ಬಲೆಗೆ ಬಿದ್ದ ಅಕ್ಷರ ದಾಸೋಹ ಅಧಿಕಾರಿ.....ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ತರಗತಿ ವಿದ್ಯಾರ್ಥಿ.....