LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಫುಟ್ಬಾಲ್ ದಂತಕಥೆ ಡಿಯೆಗೊ ಮರಡೋನಾ ನಿಧನ

ಲಂಡನ್ -

ಪುಟ್ ಬಾಲ್ ದಂಥ ಕಥೆ ಎಂದೇ ಹೆಸರಾದ ಖ್ಯಾತ ಫುಟ್ಬಾಲ್ ಆಟಗಾರ ಡಿಯೆಗೊ ಮರಡೋನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

60 ವಯಸ್ಸಿನ ಈ ಹಿರಿಯ ಕ್ರೀಡಾಪಟು ನಿಧನರಾಗಿದ್ದಾರೆ.1986ರ ವಿಶ್ವಕಪ್ ಪಂದ್ಯದಲ್ಲಿ ಅವರು ಅರ್ಜೆಂಟೀನಾಗೆ ವಿಜಯ ಲಭಿಸುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅರ್ಜೆಂಟೀನಾ ಫುಟ್ಬಾಲ್ ತಂಡದ ಮಿಡ್ಫೀಲ್ಡರ್ ಹಾಗೂ ಮ್ಯಾನೇಜರ್ ಕೂಡ ಆಗಿದ್ದರು ಮರಡೋನಾ, ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎಂದೆನಿಸಿಕೊಂಡಿದ್ದರು. 1986ರ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವರು ಬಾರಿಸಿದ ಒಂದು ಗೋಲು ಪ್ರಶಸ್ತಿಯನ್ನು ಎತ್ತಿ ಹಿಡಿಯುವಂತೆ ಮಾಡಿತ್ತು. ಇವರನ್ನು ‘ಹ್ಯಾಂಡ್ ಆಫ್ ಗಾಡ್’ ಎಂದೇ ಟೀಂನಲ್ಲಿ ಕರೆಯಲಾಗುತ್ತಿತ್ತು.

ತಮ್ಮ ವೃತ್ತಿಜೀವನದಲ್ಲಿ 91 ಪಂದ್ಯಗಳನ್ನು ಆಡಿದ್ದು, 34 ಗೋಲುಗಳನ್ನು ಬಾರಿಸಿದ್ದಾರೆ. 1986ರ ವಿಶ್ವಕಪ್ ಸೇರಿದಂತೆ 4 ಫಿಫಾ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಆಡಿದ್ದರು. 1986ರ ವಿಶ್ವಕಪ್‌ನಲ್ಲಿ ಆರ್ಜೆಂಟೀನಾ ತಂಡದ ನಾಯಕರಾಗಿದ್ದರು. ಆ ಪಂದ್ಯಾವಳಿ ಯಲ್ಲಿ ಅತ್ಯುತ್ತಮ ಆಟಗಾರ ಎಂಬ ಪುರಸ್ಕಾರಕ್ಕೆ ಭಾಜನರಾಗಿದ್ದರು.2005ರಲ್ಲಿ ಅವರು ತೂಕ ಇಳಿಸಲು ಪ್ರಯತ್ನಿಸಿದ್ದರು. 2007ರಲ್ಲಿ ಅತಿಯಾದ ಮದ್ಯಪಾನದಿಂದಾಗಿ ಆರೋಗ್ಯದಲ್ಲಿ ಏರಿಳಿತ ಕಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಫುಟ್ಬಾಲ್ ವಿಶ್ವಕಪ್‌ನಲ್ಲಿ ಅವರ ಆರೋಗ್ಯವೂ ಹದಗೆಟ್ಟಿತು ಸಧ್ಯ ತೀವ್ರ ಅನಾರೋಗ್ಯ ಮತ್ತು ಹೃದಯಾಘಾತದಿಂದ ಅವರು ನಿಧನರಾಗಿದ್ದು ಪುಟ್ ಬಾಲ್ ಕ್ರೀಡಾ ಲೋಕದಲ್ಲಿ ದಂತ ಕಥೆ ಎಂದೇ ಇವರು ಹೆಸರಾಗಿದ್ದು ಇವನ ನಿಧನದಿಂದಾಗಿ ತುಂಬಲಾರದ ನಷ್ಟವಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....