LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ಮಾಜಿ CM ಸಿದ್ದರಾಮಯ್ಯ - ಶಿಕ್ಷಕರ,ಮಕ್ಕಳ ಸಮಸ್ಯೆ ಗೆ ಸ್ಪಂದಿಸದ ಇವರನ್ನು ಮೊದಲು ಸಂಪುಟ ದಿಂದ ಕಿತ್ತು ಹಾಕಿ ಹೆಚ್ಚಾಗುತ್ತಿದೆ ಒತ್ತಾಯ.....

ಬೆಂಗಳೂರು -

ಸರ್ಕಾರಿ ಶಾಲಾ ಮಕ್ಕಳಿಗೆ ಶೂ,ಸಾಕ್ಸ್ ವಿತರಣೆ ವಿಚಾರ ರಾಜಕೀಯ ಕಚ್ಚಾಟಕ್ಕೂ ಕಾರಣವಾಗಿದೆ.ಈ ಬಾರಿ ಮಕ್ಕಳಿಗೆ ಶೂ,ಸಾಕ್ಸ್ ಕೊಡಲ್ಲ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡುತ್ತಿದ್ದಂತೆ ಕಾಂಗ್ರೆಸ್ ನಾಯಕರು ಆಕ್ಟಿವ್ ಆಗಿ ಸರ್ಕಾರದ ವಿರುದ್ಧ ಮುಗಿಬಿದ್ದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯದ ಜನರ ಬಳಿ ಭಿಕ್ಷೆ ಬೇಡಿಯಾದ್ರೂ ಮಕ್ಕಳಿಗೆ ಶೂ,ಸಾಕ್ಸ್ ನೀಡೋದಾಗಿ ಹೇಳಿದ್ರು.ಕಾಂಗ್ರೆಸ್ ನಾಯಕರು ವಿರೋಧಿಸುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಮಕ್ಕಳಿಗೆ ಶೂ,ಸಾಕ್ಸ್ ನೀಡುವುದಾಗಿ ಹೇಳಿದೆ.ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ಕಿಡಿಕಾರಿದ್ದಾರೆ.ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಒಬ್ಬ ಶಿಕ್ಷಣ ವಿರೋಧಿ ಅವಿವೇಕಿ.ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರ್ಕಾರಿ ಶಾಲಾ ಮಕ್ಕಳಿಂದ ಶೂ-ಸಾಕ್ಸ್‌ಗಳನ್ನೂ ಕಿತ್ತು ಕೊಳ್ಳಲು ಹೊರಟಿದ್ದ ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಡುತ್ತಿರುವ ಎಡವಟ್ಟು ಗಳು ಒಂದೋ,ಎರಡೋ ಮೊದಲು ಈ ಶಿಕ್ಷಣ ವಿರೋಧಿ ಯನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡದೇ ಇರುವುದರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸುತ್ತಿದ್ದ ಸೈಕಲ್,ಶೂ,ಸಾಕ್ಸ್‌ ಯೋಜನೆಗಳನ್ನು ಶಿಕ್ಷಣ ಇಲಾಖೆ ಕೈ ಬಿಟ್ಟಿತ್ತು.ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್‌ ನಾಯಕರು ಟೀಕಿಸಿದ್ದರು.ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿ ಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋ ದನೆ ನೀಡಿದ್ದಾರೆ.ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌ ವಿತರಿಸುವ ವಿಚಾರ ವಾಗಿ ಟ್ವೀಟ್ ಮಾಡಿರುವ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ನಿದ್ದೆ ಬಿಡಿಸ ಬೇಕಾದರೆ ನಾವು ಎಚ್ಚರಿಸಬೇಕಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್ ಮಾಡುವ ಜತೆಗೆ ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡಿರುವ ಅವರು,ಶೂ,ಸಾಕ್ಸ್ ಬಗ್ಗೆ ಸಚಿವರ ಹೇಳಿಕೆ ವಿಚಾರ ಪ್ರಸ್ತಾಪಿಸಿ,ನಾವು ಬಡಮಕ್ಕಳಿಗೆ ಅನುಕೂಲ ವಾಗಲೆಂದು ಸಾಕ್ಸ್ ,ಶೂ ಕೊಡುತ್ತಿದ್ದೆವು.ಆದರೆ ಇವರು ನಿಲ್ಲಿಸಲು ಹೊರಟರು.ನಾವು ಒತ್ತಾಯ ಮಾಡಿದ ಮೇಲೆ ಕೊಡುತ್ತೇವೆ ಎಂದರು.ಶಾಲೆಗಳು ಆರಂಭವಾಗಿವೆ.ಶೂ, ಸಮವಸ್ತ್ರ ಕೊಡಬೇಕಿತ್ತು.ಆದರೆ ಇನ್ನೂ ಯಾವುದನ್ನೂ ಕೊಟ್ಟಿಲ್ಲ.ತಕ್ಷಣ ವಿತರಣೆ ಕಾರ್ಯ ಆರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...