ರಾಮನಗರ -
ಶಾಲೆಯಲ್ಲಿ ಮಾಡಿದ ಗಲಾಟೆ ಪೋಷಕರಿಗೆ ಗೊತ್ತಾಗುತ್ತದೆ ಎಂಬ ಭಯಕ್ಕೆ ಹತ್ತನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ರಾತ್ರಿ ವೇಳೆ ವಸತಿ ಶಾಲೆಯಿಂದ ನಾಪತ್ತೆಯಾಗಿರುವ ಘಟನೆ ರಾಮನಗರ ದಲ್ಲಿ ನಡೆದಿದೆ.ಶಿಕ್ಷಕರು ಪೋಷಕರನ್ನು ಶಾಲೆಗೆ ಕರೆಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ವಿದ್ಯಾರ್ಥಿ ಗಳು ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಿದ್ದಾರೆ
ರಾಮನಗರ ಟೌನ್‌ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಿನ್ನೆ ರಾತ್ರಿ ಸುಮಾರು 10 ಗಂಟೆ ವೇಳೆಗೆ ಯಾರಿಗೂ ತಿಳಿಯ ದಂತೆ ಶಾಲೆಯಿಂದ ಹೊರಹೋಗಿದ್ದಾರೆ ಈ ಪೈಕಿ ಇಬ್ಬರು ರಾಮನಗರದವರಾಗಿದ್ದು, ಉಳಿದ ಇಬ್ಬರು ಬೆಂಗಳೂರಿನವರು ಎಂದು ತಿಳಿದುಬಂದಿದೆ.
ನಾಲ್ವರು ವಿದ್ಯಾರ್ಥಿಗಳು ಶಾಲೆಯಲ್ಲಿ ತಮ್ಮ ಸಹಪಾಠಿ ಗಳೊಂದಿಗೆ ಗಲಾಟೆ ಮಾಡಿಕೊಂಡಿದ್ದು ಈ ವಿಚಾರ ಶಿಕ್ಷಕರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳನ್ನು ಕರೆದು ಬೈದು ಬುದ್ಧಿವಾದ ಹೇಳಿದ್ದರು. ಅಲ್ಲದೆ, ಇಂತಹ ವರ್ತನೆಯನ್ನು ಸಹಿಸುವುದಿಲ್ಲ, ಗಲಾಟೆ ವಿಚಾರವನ್ನು ಪೋಷಕರಿಗೆ ತಿಳಿಸಲು ಅವರನ್ನು ಶಾಲೆಗೆ ಕರೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.ಶಿಕ್ಷಕರ ಮಾತಿನಿಂದ ಆತಂಕ ಗೊಂಡ ವಿದ್ಯಾರ್ಥಿಗಳು ಪೋಷಕರಿಗೆ ವಿಷಯ ತಿಳಿಯಬಾರದು ಎಂಬ ಕಾರಣಕ್ಕೆ ಶಾಲೆಯಿಂದ ಹೊರಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ರಾತ್ರಿ ಮುಖ್ಯ ಗೇಟ್ ಬಳಿ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದ ಕಾರಣ, ಕಾಂಪೌಂಡ್ ಗೋಡೆ ಹಾರಿ ನಾಲ್ವರೂ ಪರಾರಿಯಾಗಿದ್ದಾರೆ.
ರಾತ್ರಿ ಶಾಲೆಯಿಂದ ಹೊರಹೋದ ವಿದ್ಯಾರ್ಥಿಗಳು ಮರುದಿನ ಸಂಜೆಯಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಶಾಲಾ ಸಿಬ್ಬಂದಿ ಆತಂಕಗೊಂಡಿದ್ದಾರೆ. ತಕ್ಷಣವೇ ಪ್ರಾಂಶುಪಾಲೆ ರೂಪ ಅವರು ರಾಮನಗ ರದ ಐಜೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಕಾಣೆಯಾದ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕರೆತರುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ದೂರು ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿ ಸಿದ್ದಾರೆ. ಈಗಾಗಲೇ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಯಾವ ಮಾರ್ಗದಲ್ಲಿ ತೆರಳಿದ್ದಾರೆ ಎಂಬ ಮಾಹಿತಿ ಕಲೆಹಾಕಲಾಗುತ್ತಿದೆ.ಶಿಕ್ಷಕರ ಎಚ್ಚರಿ ಕೆಗೆ ಹೆದರಿ ಮನೆಗೆ ಹೋಗಿದ್ದಾರೆಯೇ ಅಥವಾ ಬೇರೆಲ್ಲಾದರೂ ತೆರಳಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ನಾಲ್ವರು ವಿದ್ಯಾರ್ಥಿಗಳು ಸುರಕ್ಷಿತ ವಾಗಿ ಪತ್ತೆಯಾಗಲಿ ಎಂದು ಪೋಷಕರು ಹಾಗೂ ಶಾಲಾ ಸಿಬ್ಬಂದಿ ಕಾಯುತ್ತಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....