LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇನ್ನೂ ಮುಂದೆ ಎರಡು ವರ್ಷಕ್ಕೊಮ್ಮೆ ಪೊಲೀಸ್ ಅಧಿಕಾರಿಗಳ ವರ್ಗಾವಣೆ - ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು -

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ಹೆಚ್ಚಳ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮೇಳನದ ಬಳಿಕ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸಂಬಂಧ ಪೊಲೀಸ್ ಮಂಡಳಿಯನ್ನು ರಚನೆ ಮಾಡಲಾಗಿದೆ. ಈ ಮಧ್ಯೆ ಹಿಂದಿನ ಸರಕಾರ ಅಧಿಕಾರಿಗಳ ವರ್ಗಾವಣೆಯನ್ನು ಎರಡು ವರ್ಷಗಳಿಂದ ಒಂದು ವರ್ಷಕ್ಕೆ ಇಳಿಕೆ ಮಾಡಿತ್ತು. ಇದೀಗ ನಮ್ಮ ಸರಕಾರ ಅದನ್ನು ಪುನಃ ಎರಡು ವರ್ಷಕ್ಕೆ ಹೆಚ್ಚಳ ಮಾಡಲು ಉದ್ದೇಶಿಸಿದೆ. ಈ ಬಗ್ಗೆ ಶೀಘ್ರದಲ್ಲೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಆನ್‍ಲೈನ್ ಗೇಮ್ಸ್ ಗಳನ್ನು ನಿಷೇಧ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದ್ದು, ಈ ಸಂಬಂಧ ಈಗಾಗಲೇ ಕರಡು ಸಿದ್ಧಪಡಿಸಿದ್ದು, ಶೀಘ್ರದಲ್ಲೆ ಕಾನೂನು ರೂಪಿಸಲು ಸರಕಾರ ಉದ್ದೇಶಿಸಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು

ಆನ್‍ಲೈನ್ ಗೇಮ್ಸ್ ಗಳಿಂದ ವಂಚನೆ ಪ್ರಕರಣಗಳು ನಡೆಯುತ್ತಿದೆ. ಕಾಲೇಜು ವಿದ್ಯಾರ್ಥಿಗಳು ಆನ್‍ಲೈನ್ ಗೇಮ್ಸ್ ನಲ್ಲಿ ಹೆಚ್ಚಾಗಿ ತೊಡಗಿಕೊಳ್ಳುತ್ತಿದ್ದಾರೆ. ಇದು ಅವರ ಶೈಕ್ಷಣಿಕ ಪ್ರಗತಿಯ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಅಲ್ಲದೆ ಆನ್‍ಲೈನ್ ಗೇಮ್ಸ್ ಗಳ ಮೂಲಕ ಜೂಜಾಟವೂ ನಡೆಯುತ್ತಿದೆ. ಸಾಕಷ್ಟು ಜನರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿರುವ ಕಾನೂನುಗಳನ್ನು ಅಧ್ಯಯನ ನಡೆಸಿದ್ದು, ಆ ರಾಜ್ಯಗಳಲ್ಲಿ ಕೆಲ ಗೇಮ್ಸ್ ಗಳಿಗೆ ಅನುಮತಿ ನೀಡಲಾಗಿದೆ. ಹೀಗಾಗಿ ಕಾನೂನು ಇಲಾಖೆಯ ಮೂಲಕ ಪರಿಶೀಲನೆ ನಡೆಸಿದ ಬಳಿಕ ಆನ್‍ಲೈನ್ ಗೇಮ್‍ಗಳ ನಿಷೇಧಕ್ಕೆ ಸೂಕ್ತ ಕ್ರಮ ವಹಿಸಲು ಉದ್ದೇಶಿಸಲಾಗಿದೆ ಎಂದರು.

'ಕಾರಾಗೃಹದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವರದಿ ತರಿಸಿಕೊಂಡಿದ್ದು, ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಸರಿಪಡಿಸಲಾಗಿದೆ'

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....