LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಾವಿನಲ್ಲೂ ಸಾರ್ಥಕತೆ ಮೆರೆದ ಯಾದವಾಡ ಗ್ರಾಮದ ಗದಿಗೆಪ್ಪ ಕೋಯಪ್ಪನವರ - ದೇಹವನ್ನು ವೈದ್ಯಕೀಯ ಜ್ಞಾನಾರ್ಜನೆ ಮತ್ತು ಸಂಶೋಧನೆಗೆ ನೀಡಿ ಮಾದರಿಯಾದ ಹಿರಿಯ ಜೀವಿ

ಧಾರವಾಡ -

ಸಾವಿನಲ್ಲೂ ವಯೋವೃದ್ದರೊಬ್ಬರು ದೇಹವನ್ನು ವೈದ್ಯಕೀಯ ಜ್ಞಾನಾರ್ಜನೆ ಮತ್ತು ಸಂಶೋಧನೆಗೆ ನೀಡಿ ಸಾರ್ಥಕತೆ ಮೆರೆದ ಘಟನೆ ಧಾರವಾಡ ದ ಯಾದವಾಡ ಗ್ರಾಮದಲ್ಲಿ ನಡೆದಿದೆ. ಹೌದು ತಾಲೂಕಿನ ಯಾದವಾಡ ಗ್ರಾಮದ ವೃದ್ಧರೊ ಬ್ಬರು ದೇಹದಾನ ಮಾಡುವ ಮೂಲಕ ಸಾವಿನ ಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಗದಿಗೆಪ್ಪ ನಿಂಗಪ್ಪ ಕೋಯಪ್ಪನವರ (88) ರೈತಾಪಿ ಕುಟುಂ ಬದಲ್ಲಿ ಜನಸಿ ಬುಧವಾರ ಸಹಜಸಾವಿಗೆ ಈಡಾಗಿ ದ್ದಾರೆ.

ತಾವು ಮರಣದ ನಂತರ ತನ್ನ ದೇಹವನ್ನು ವೈದ್ಯ ಕೀಯ ಜ್ಞಾನಾರ್ಜನೆ ಮತ್ತು ಸಂಶೋಧನೆಗೆ ಸಮರ್ಪಿಸುವುದಾಗಿ ಹೇಳಿ 2012ರಲ್ಲಿ ಹುಬ್ಬಳ್ಳಿ ಯ ಕಿಮ್ಸ್ ಗೆ  ದೇಹ ಹಾಗೂ ಎಂ.ಎಂ. ಜೋಶಿ ಸಂಸ್ಥೆಗೆ ನೇತ್ರದಾನ ಮಾಡಿದ್ದಾರೆ. ಗದಿಗೆಪ್ಪ ಅವರ ಆಶಯದಂತೆ ಇವರ ಕುಟುಂಬದವರು ಹುಬ್ಬಳ್ಳಿ ಕಿಮ್ಸ್ ಹಾಗೂ ಎಂ.ಎಂ. ಜೋಶಿ ಆಸ್ಪತ್ರೆಗೆ ವೈದ್ಯ ರನ್ನು ಸಂಪರ್ಕಿಸಿ ಮೃತದೇಹವನ್ನು ಹಸ್ತಾಂತರಿ ಸಿದ್ದಾರೆ.

ಮೃತರ ಮನೆಯಲ್ಲಿಯೇ ನೇತ್ರವನ್ನು ಸುರಕ್ಷಿತ ವಾಗಿ ತೆಗೆದುಕೊಂಡು ಹೋಗಲಾಯಿತು. ಹಿರಿಯ ಜೀವಿ ಗದಿಗೆಪ್ಪ ದೇಹದಾನ ಮಾಡಿರುವ ವಿಷಯ ತಿಳಿದ ಗ್ರಾಮಸ್ಥರು ಅಂತಿಮ ನಮನ ಸಲ್ಲಿಸಿ ವಿದಾಯ ಹೇಳಿದರು.ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...