LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಅತಿ ಹೆಚ್ಚು ಹಣಕ್ಕೆ RCB ಪಾಲಾದ ಗ್ಲೆನ್ ಮ್ಯಾಕ್ಸ್‌ವೆಲ್ - ಈಬಾರಿ ಆದರೂ ಕಪ್......

ಗ್ಲೆನ್ ಮ್ಯಾಕ್ಸ್‌ವೆಲ್ ಗೆ ಈ ಬಾರಿಯ ಐಪಿಎಲ್ 2021 ಹರಾಜು ಪ್ರಕ್ರಿಯೆಯಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಮೂಲಬೆಲೆ ₹2ಕೋಟಿಯಾಗಿದ್ದು, ಕಳೆದ ಬಾರಿ ₹10.75 ಕೋಟಿಗೆ ಪಂಜಾಬ್ ತಂಡದ ಪಾಲಾಗಿದ್ದರು.

ಆದರೆ, ಈ ವರ್ಷ ಪಂಜಾಬ್ ತಂಡವು ಮ್ಯಾಕ್ಸ್‌ವೆಲ್ ಅವರನ್ನು ಕೈಬಿಟ್ಟಿದ್ದು, ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಊಹಿಸದ ರೀತಿಯಲ್ಲಿ ಬೇಡಿಕೆ ವ್ಯಕ್ತವಾಗಿ ₹14.25 ಕೋಟಿ ಗೆ ರಾಯಲ್ ಚಾಲೆಂಜರ್ಸ್ ತಂಡದ ಪಾಲಾಗಿದ್ದಾರೆ. ಕಳೆದ ಬಾರಿ ಪಂಜಾಬ್ ತಂಡದಲ್ಲಿ ನೀರಸ ಪ್ರದರ್ಶನ ತೋರಿದ್ದ ಮ್ಯಾಕ್ಸ್‌ವೆಲ್ ನಂತರ ಆಸ್ಟ್ರೇಲಿಯಾದಲ್ಲಿ ಆಡುವಾಗ ಅಬ್ಬರಿಸಿದ್ದರು. ಅವರ ಈ ಪ್ರದರ್ಶನವೇ ಇಂದಿನ ಬೇಡಿಕೆಗೆ ಕಾರಣ ಎನ್ನಲಾಗುತ್ತಿದೆ.

ಜೊತೆಗೆ, ಸ್ವತಃ ಮ್ಯಾಕ್ಸ್‌ವೆಲ್ RCB ತಂಡದ ಪರ ಆಡುವ ಆಸೆ ವ್ಯಕ್ತಪಡಿಸಿದ್ದರಿಂದ ಅವರನ್ನು ಬೆಂಗಳೂರು ತಂಡ ಖರೀದಿಸಬಹುದು ಎಂಬ ಮಾತುಗಳು ಹರಿದಾಡುತ್ತಿದ್ದವು. ಮ್ಯಾಕ್ಸ್‌ವೆಲ್ ಅವರನ್ನು ಕೊಂಡ ನಂತರ RCB ಖಾತೆಯಲ್ಲಿ ₹21.15 ಕೋಟಿ ಉಳಿದುಕೊಂಡಿದೆ. ಆರಂಭ ದಿಂದಲೂ ಚೆನ್ನೈ ಮತ್ತು RCB ಮಧ್ಯೆ ಭಾರೀ ಪೈಪೋಟಿ ನಡೆದಿತ್ತು.

ಕೊನೆಯ ಹಂತದವರೆಗೂ ಮ್ಯಾಕ್ಸ್‌ವೆಲ್ ಅವರನ್ನು ಖರೀದಿಸಲು CSK ಆಸಕ್ತಿ ತೋರಿಸುತ್ತಲೇ ಬಂದಿತಾದರೂ ಕೊನೆಯಲ್ಲಿ ಬೆಂಗಳೂರು ತಂಡ ಪಣತೊಟ್ಟು ತನ್ನ ತೆಕ್ಕೆಗೆ ತೆಗೆದುಕೊಂಡಿತು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....