ಬೆಂಗಳೂರು -
ಸರ್ಕಾರಿ' ನೌಕರರಿಗೆ ಗುಡ್ ನ್ಯೂಸ್ ಆರೋಗ್ಯ ಸಂಜೀವಿನಿ ಯೋಜನೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ ಹೌದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿ ಸುವ ಮಹತ್ವದ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (KASS) ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ಯೋಜನೆಯಡಿ ನೋಂದಾಯಿಸಿಕೊಳ್ಳಲು ಮುಂದೆ ಬರುವ ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಿ ಅಧಿಸೂಚಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಪ್ರತ್ಯಾಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2025ರ ಅಕ್ಟೋಬರ್ 29ರಂದು ಸರ್ಕಾರದ ಆದೇಶ ಹೊರಡಿ ಸಿದೆ. ಇದರಿಂದಾಗಿ ಯೋಜನೆಯಡಿ ಹೊಸ ಖಾಸಗಿ ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆ ಮತ್ತಷ್ಟು ತ್ವರಿತಗೊ ಳ್ಳುವ ನಿರೀಕ್ಷೆಯಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ.ಈ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ
ಈ ಹಿಂದೆ ಯೋಜನೆಯಡಿ ನೋಂದಾಯಿಸಿಕೊಳ್ಳಲು ಬಯಸುವ ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಿ ಅಧಿಸೂಚಿಸುವ ಕಾರ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೇ ನಿರ್ವಹಿಸಬೇ ಕೆಂದು ಸರ್ಕಾರ ಆದೇಶಿಸಿತ್ತು ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿ, ಯೋಜನೆಯ ಅನುಷ್ಠಾನವನ್ನು ವೇಗಗೊಳಿಸುವ ಉದ್ದೇಶದಿಂದ ಇದೀಗ ಈ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವರ್ಗಾಯಿಸಲಾಗಿದೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಇಚ್ಛಿಸುವ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ಮೂಲ ಸೌಕರ್ಯ ಹಾಗೂ ಇತರ ಅಗತ್ಯ ಮಾನದಂಡಗಳನ್ನು ಹೊಂದಿರಬೇಕು.ಈ ಮಾನದಂಡಗಳನ್ನು ಪರಿಶೀ ಲಿಸಿದ ಬಳಿಕ ಅರ್ಹ ಆಸ್ಪತ್ರೆಗಳನ್ನು ನೋಂದಾಯಿಸಿ ಅಧಿಸೂಚಿಸುವ ಅಧಿಕಾರವನ್ನು ಸುವರ್ಣಆರೋಗ್ಯ ಸುರಕ್ಷಾ ಟ್ರಸ್ಟ್ ಹೊಂದಿರಲಿದೆ.
ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿರುವ ಮಾಹಿತಿಯ ಪ್ರಕಾರ, ಈ ಹಿಂದೆ ಹೊರಡಿಸಲಾದ ಎರಡು ಅಧಿಸೂಚನೆಗಳ ಮೂಲಕ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಒಟ್ಟು 256 ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಿ ಅಧಿಸೂಚಿ ಸಲಾಗಿದೆ.ಮೊದಲ ಅಧಿಸೂಚನೆ: 186 ಖಾಸಗಿ ಆಸ್ಪತ್ರೆಗಳು ಎರಡನೇ ಅಧಿಸೂಚನೆ: 70 ಖಾಸಗಿ ಆಸ್ಪತ್ರೆಗಳು ಒಟ್ಟು: 256 ಖಾಸಗಿ ಆಸ್ಪತ್ರೆಗಳು
ಸರ್ಕಾರದ ಈ ಹೊಸ ನಿರ್ಧಾರದಿಂದ ಯೋಜನೆ ಯಡಿ ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆ ತ್ವರಿತ ಗೊಳ್ಳಲು ಅನುಕೂಲವಾಗಲಿದೆ. ಹೆಚ್ಚಿನ ಅರ್ಹ ಖಾಸಗಿ ಆಸ್ಪತ್ರೆಗಳು ಯೋಜನೆಯ ವ್ಯಾಪ್ತಿಗೆ ಸೇರುವುದರಿಂದ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಪಡೆಯಲು ಹೆಚ್ಚಿನ ಆಸ್ಪತ್ರೆಗಳ ಆಯ್ಕೆ ಲಭ್ಯವಾಗುವ ಸಾಧ್ಯತೆಯಿದೆ.ಆಸ್ಪತ್ರೆಗಳ ಮೂಲ ಸೌಕರ್ಯ ಮತ್ತು ಅರ್ಹತಾ ಮಾನದಂಡಗಳನ್ನು ಪರಿಶೀಲಿಸುವ ಜವಾಬ್ದಾರಿಯೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವಹಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....