LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಗ್ರಾಮೀಣ ಕೃಪಾಂಕದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ CM ವೇತನ ಬಡ್ತಿ ಗೆ ಸಮ್ಮತಿ.....

ಬೆಂಗಳೂರು -

ಗ್ರಾಮೀಣ ಕೃಪಾಂಕದ ವಿಶೇಷ ನಿಯಮಗಳ ಅನ್ವಯ ನೇಮಕಗೊಂಡ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ 2013ರಲ್ಲಿ ಸಚಿವ ಸಂಪುಟ ಸಭೆ ತೆಗೆದುಕೊಂಡ ನಿರ್ಣ ಯದಂತೆ ಎರಡು ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡಲು ಸರ್ಕಾರ ಸಮ್ಮತಿಸಿದೆ.

1997-98ನೇ ಸಾಲಿನಲ್ಲಿ ಶೇ 10ರಷ್ಟು ಗ್ರಾಮೀಣ ಕೃಪಾಂಕ ಪಡೆದು ನೇಮಕವಾಗಿದ್ದ ಶಿಕ್ಷಕರ ಪಟ್ಟಿಯನ್ನು ಸುಪ್ರೀಂ ಕೋರ್ಟ್‌ ಆದೇಶದಂತೆ ಪರಿಷ್ಕರಿಸಿ ನಗರ ಪ್ರದೇಶದ ಅರ್ಹ ಅಭ್ಯರ್ಥಿಗಳಿಗೆ 2003ರಲ್ಲಿ ಅವಕಾಶ ಕಲ್ಪಿಸ ಲಾಗಿತ್ತು.ಆಗ ಪಟ್ಟಿಯಿಂದ ಹೊರಗುಳಿದ 1,700 ಶಿಕ್ಷಕ ರನ್ನು ವಜಾಗೊಳಿಸಲಾಗಿತ್ತು.ನಾಲ್ಕು ತಿಂಗಳ ನಂತರ ಮಾನವೀಯತೆ ದೃಷ್ಟಿಯಿಂದ ಅವರಿಗೆ ಮತ್ತೆ ಕೆಲಸ ನೀಡಲಾಗಿತ್ತು.ಪರಿಷ್ಕೃತ ಪಟ್ಟಿಯಲ್ಲಿ ಸ್ಥಾನ ಪಡೆದ ನಗರ ಪ್ರದೇಶದ ಅಭ್ಯರ್ಥಿಗಳ ಸೇವೆಯನ್ನು 1997-98ರಿಂದಲೇ ಪೂರ್ವಾನ್ವಯ ಮಾಡಿದ್ದ ಸರ್ಕಾರ ಮರು ನೇಮಕಗೊಂಡ ಗ್ರಾಮೀಣ ಶಿಕ್ಷಕರ ವಿಷಯದಲ್ಲಿ ತಾರತಮ್ಯ ನೀತಿ ಅನುಸ ರಿಸಿತ್ತು ಈ ತಾರತಮ್ಯದ ವಿರುದ್ಧ ಶಿಕ್ಷಕರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ.ಗ್ರಾಮೀಣ ಕೃಪಾಂಕ ಆಧಾರಿತ ನೌಕರರು ಗುರುವಾರ ಸಲ್ಲಿಸಿದ ಮನವಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರ ಜತೆ ನಡೆಸಿದ ಮಾತುಕತೆಯ ಫಲವಾಗಿ ಸರ್ಕಾರ ಸೇವಾ ಜ್ಯೇಷ್ಠತೆ, ಪಿಂಚಣಿಗೆ ಹಿಂದಿನ ಸೇವೆ ಪರಿಗಣಿಸಲು ಒಪ್ಪಿಗೆ ನೀಡಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....