ಬೆಂಗಳೂರು -
ರಾಜ್ಯ ಸಾರಿಗೆ ನೌಕರರಿಗೆ ರಾಜ್ಯದ ಸಾರಿಗೆ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ ಹೌದು ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿದ್ದ ಸಾರಿಗೆ ನೌಕರರ ವೇತನ ಹಿಂಬಾಕಿ ಪಾವತಿಗೆ ರಾಜ್ಯ ಸರ್ಕಾರ ಮತ್ತೊಂದು ಕಂತಿನ ಅನುದಾನ ಬಿಡುಗಡೆ ಮಾಡಿದೆ.ಇದರೊಂದಿಗೆ ನೌಕರರಿಗೆ ಶುಭ ಸುದ್ದಿ ಯನ್ನು ನೀಡಿದ್ದಾರೆ ಮುಖ್ಯಮಂತ್ರಿ ವಿಶೇಷ ಅನುದಾ ನದಡಿ ಸಾರಿಗೆ ನಿಗಮಗಳಿಗೆ 280 ಕೋಟಿರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ಸಾರಿಗೆ ನೌಕರರಿಗೆ ಸರ್ಕಾರ ಒಟ್ಟು 1,271 ಕೋಟಿ ರೂಪಾಯಿ ವೇತನ ಹಿಂಬಾಕಿ ನೀಡಬೇಕಿತ್ತು. ಈ ಪೈಕಿ ಮೊದಲ ಕಂತಿನಲ್ಲಿ 450 ಕೋಟಿ ರೂಪಾಯಿ ಹಾಗೂ ಎರಡನೇ ಕಂತಿನಲ್ಲಿ 170 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಇದೀಗ ಮೂರನೇ ಹಂತದಲ್ಲಿ 280 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಅವರಿಗೆ ಸಚಿವ ಭೈರತಿ ಸುರೇಶ್ ಧನ್ಯವಾದ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....